ಬೆಂಗಳೂರು | ವಿಧಾನಸಭಾ ಉಪಚುನಾವಣೆ; ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಸೋಲಿಸಲು ಸಿಪಿಐಎಂ ಕರೆ

Date:

Advertisements

ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ನಿರ್ಣಾಯಕವಾಗಿ ಸೋಲಿಸುವಂತೆ ಸಿಪಿಐಎಂ ಕರೆ ನೀಡಿದೆ.

ಬೆಂಗಳೂರಿನಲ್ಲಿ ಶನಿವಾರದಂದು ಪತ್ರಿಕೆ ಹೇಳಿಕೆ ನೀಡಿರುವ ಅವರು, “ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಮತಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸ್ಥಳೀಯ ಮತದಾರರು ಪ್ರಜಾಪ್ರಭುತ್ವ ವಿರೋಧಿ ಪಕ್ಷಗಳನ್ನು ಹೀನಾಯವಾಗಿ ಸೋಲಿಸಬೇಕು” ಎಂದು ಭಾರತ ಕಮ್ಯುನಿಸ್ಟ್ ಪಕ್ಷದ(ಮಾರ್ಕ್ಸವಾದಿ) ರಾಜ್ಯ ಸಮಿತಿಯು ಕರೆ ನೀಡಿದೆ” ಎಂದು ಪಕ್ಷದ ಕಾರ್ಯದರ್ಶಿ ಯು ಬಸವರಾಜು ತಿಳಿಸಿದ್ದಾರೆ.

“ಈ ಪಕ್ಷಗಳು ಕೇಂದ್ರದಲ್ಲಿ ಅಧಿಕಾರದಲ್ಲಿದ್ದು, ದುಡಿಯುವ ಜನರು ಹಾಗೂ ಎಲ್ಲ ನಾಗರಿಕರನ್ನು ತೀವ್ರ ಸಂಕಷ್ಠಕ್ಕೀಡು ಮಾಡುವ ಲೂಟಿಕೋರ ಕಾರ್ಪೋರೇಟ್ ಸಂಸ್ಥೆಗಳ ಪರವಾದ ಹಣಕಾಸು ನೀತಿಗಳನ್ನು ಅನುಸರಿಸುತ್ತಿವೆ. ಸದರಿ ಲೂಟಿಕೋರರ ಲೂಟಿಗೆ ವಿರುದ್ಧವಾದ ಹೋರಾಟವನ್ನು ಮಟ್ಟ ಹಾಕಲು ಹಾಗೂ ಪ್ರತಿರೋಧದ ಸ್ಥಿತಿ ಹತ್ತಿಕ್ಕಲು ಇವು ಒಂದೆಡೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಮತ್ತು ಜನತೆ ಒಗ್ಗೂಡದಂತೆ ತಡೆಯಲು, ಪರಸ್ಪರರು ಹೊಡೆದಾಡಿಕೊಳ್ಳುವಂತಹ ವಿಭಜನಕಾರಿ ಕೋಮುವಾದಿ ದ್ವೇಷಕ್ಕೆ ನೆರವಾಗುತ್ತಿದ್ದು, ಮೌನ ಬೆಂಬಲ ನೀಡುತ್ತಿವೆ” ಎಂದರು.

Advertisements

“ಭಾರತದ ಸಂವಿಧಾನ ವಿರೋಧಿಯಾದ ಇಂತಹ ನಡೆಗಳನ್ನು ತಡೆಯುವುದು ತುರ್ತು ಅಗತ್ಯವಾಗಿದೆ. ಹೀಗಾಗಿ, ಇವುಗಳ ಬೆಳವಣಿಗೆಯನ್ನು ತಡೆಯಲು ಇವುಗಳನ್ನು ಸೋಲಿಸುವುದು ಅಗತ್ಯವಾಗಿದೆ. ಇವುಗಳನ್ನು ಸೋಲಿಸಲು ಶಕ್ತವಾದ ಕಾಂಗ್ರೆಸ್ ಪಕ್ಷ ಬಿಟ್ಟರೆ ಅನ್ಯರಿಲ್ಲದ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಈ ಮೂರು ಕ್ಷೇತ್ರಗಳಲ್ಲಿ ಮತ ನೀಡಬೇಕು” ಎಂದು ಸಿಪಿಐಎಂ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ವಿದ್ಯುತ್‌ ಸ್ಪರ್ಷದಿಂದ ಬಾಲಕ ಸಾವು

“ಕಾಂಗ್ರೆಸ್ ಪಕ್ಷವೂ ಕೂಡಾ ಲೂಟಿಕೋರ ಕಾರ್ಪೋರೇಟ್ ಸಂಸ್ಥೆಗಳ ಪರವಾದ, ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿರುವುದು ಅನುಭವವೇದ್ಯವಾಗಿದೆ. ಅದು ಅನುಭವದಿಂದ ಪಾಠ ಕಲಿಯುತ್ತಿಲ್ಲ. ಹೀಗಾಗಿ, ಕಾಂಗ್ರೆಸ್ ಪಕ್ಷದ ಈ ಜನ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಜನತೆ, ಪ್ರಜಾಪ್ರಭುತ್ವ ಹಾಗೂ ಸೌಹಾರ್ದತೆಯ ರಕ್ಷಣೆಗಾಗಿಯೂ ಜನ ಚಳುವಳಿಯಲ್ಲಿ ತೊಡಗಿ ಬಲಗೊಳಿಸಬೇಕು” ಎಂದು ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X