ಬೆಂಗಳೂರು | ನೇಮಕಾತಿ ಆದೇಶಕ್ಕೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ಮನವಿ

Date:

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಹೊರತಾಗಿಯೂ ಕಳೆದ ಎರಡು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಸದ ಸರ್ಕಾರದ ಕ್ರಮ ವಿರೋಧಿಸಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

- Advertisement -

ನನೆಗುದಿಗೆ ಬಿದ್ದಿರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ಆರಂಭಿಸುವಂತೆ ಹಾಗೂ ನ್ಯಾಯಾಲಯದ ಆದೇಶಕ್ಕೊಳಪಟ್ಟಂತಹ ಕಂಡೀಷನಲ್ ನೇಮಕಾತಿ ಆದೇಶ ನೀಡುವಂತೆ ಸಹಾಯಕ ಪ್ರಾಧ್ಯಾಪಕರ ಬಳಗದ ರಾಜ್ಯ ನಿಯೋಗ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು 2021ರ ಅಕ್ಟೋಬರ್‌ನಲ್ಲಿ ಹೊರಡಿಸಿತ್ತು. 2022 ರ ಮಾರ್ಚ್‌ನಲ್ಲಿ ಪರೀಕ್ಷೆ ನಡೆಸಿತ್ತು. ಈ ವೇಳೆ ಭೂಗೋಳಶಾಸ್ತ್ರ ವಿಷಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಕಂಡು ಬಂದಿತ್ತು. ಈ ಕುರಿತು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಅಂತಿಮ ಆಯ್ಕೆ ಪಟ್ಟಿ ಸಲ್ಲಿಸಲಾಗಿತ್ತು” ಎಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿ ಜೈಶಂಕರ್‌ ತಿಳಿಸಿದ್ದಾರೆ.

“ಕಳೆದ ಮಾರ್ಚ್ ತಿಂಗಳಲ್ಲಿ ಅಂತಿಮ ಪಟ್ಟಿ ಪ್ರಕಟಗೊಂಡಿತ್ತು. ಅದಾದ ನಂತರ ಯಾವುದೇ ಪ್ರಕ್ರಿಯೆಗಳು ಆರಂಭಗೊಂಡಿರುವುದಿಲ್ಲ. ಇದರಿಂದಾಗಿ ಪ್ರಾಮಾಣಿಕವಾಗಿ ಕಠಿಣ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯಥಿ೯ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಮಾಜಿಕವಾಗಿ, ಆಥಿ೯ಕವಾಗಿ, ಮಾನಸಿಕವಾಗಿ ಜರ್ಜರಿತರಾಗಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್‌ ದರ ಏರಿಕೆ ಹಿಂಪಡೆಯುವಂತೆ ಆಗ್ರಹ

ಈ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಸಚಿವರು ಸ್ಪಂದಿಸುವುದಾಗಿ ತಿಳಿಸಿದ್ದಾರೆ. ರಾಜ್ಯಪಾಲರಿಗೂ ಮನವಿ ಸಲ್ಲಿಸಿದ್ದೇವೆ. ಸರ್ಕಾರ ಕೂಡಲೇ ಸ್ಪಂದಿಸದೆ ಹೋದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಹಾಯಕ ಪ್ರಾಧ್ಯಾಪಕರ ಬಳಗ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...