ಬೆಂಗಳೂರು | ‘ಅವಳ ಹೆಜ್ಜೆ’ ಮಹಿಳಾ ಕನ್ನಡ ಕಿರುಚಿತ್ರೋತ್ಸವ: ಕವಿತಾ ಅವರ ‘ಅನ್ ಹರ್ಡ್ ಎಕೋಸ್’ಗೆ ಪ್ರಶಸ್ತಿ

Date:

Advertisements

ಬೆಂಗಳೂರಿನ ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿದ್ದ ‘ಅವಳ ಹೆಜ್ಜೆ’ ಮಹಿಳಾ ಕನ್ನಡ ಕಿರುಚಿತ್ರೋತ್ಸವದಲ್ಲಿ ನಿರ್ದೇಶಕಿ ಕವಿತಾ ಬಿ ನಾಯಕ್ ಅವರ ‘ಅನ್ ಹರ್ಡ್ ಎಕೋಸ್” ಎಂಬ ಕನ್ನಡ ಕಿರುಚಿತ್ರವು ಪ್ರತಿಷ್ಠಿತ ಪ್ರಶಸ್ತಿಯ ಜೊತೆಗೆ ₹1 ಲಕ್ಷ ನಗದು ಬಹುಮಾನವನ್ನು ಗೆದ್ದಿದೆ.

ಎಂಟು ಆಕರ್ಷಕ ಕಿರುಚಿತ್ರಗಳನ್ನು ಪ್ರದರ್ಶಿಸಿದ ಈ ಉತ್ಸವವು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿತ್ತು. ಎಂಟು ನಿರ್ದೇಶಕಿಯರೊಂದಿಗಿನ ಪ್ರಶ್ನೋತ್ತರದಲ್ಲಿ ಪ್ರೇಕ್ಷಕರು ಉತ್ಸಾಹಭರಿತ, ಚಿಂತನಶೀಲ ಪ್ರಶ್ನೆಗಳನ್ನು ಅವರ ಮುಂದಿಟ್ಟರು.

ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಕವಿತಾ ಬಿ ನಾಯಕ್ ರಂಗಭೂಮಿ ಕಲಾವಿದೆ ಮತ್ತು ನಿರ್ದೇಶಕಿ. ಬದುಕು ಕಮ್ಯೂನಿಟಿ ಕಾಲೇಜಿನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಗಳಲ್ಲಿ ಡಿಪ್ಲೋಮಾ ಪಡೆದು ‘ಹದಿನೇಳೆಂಟು’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಿನಿಮಾ ಮಾಧ್ಯಮದ ಮೂಲಕ ಮಹಿಳೆಯರ ಸಮಸ್ಯೆಗಳನ್ನು ಪ್ರೇಕ್ಷಕರಿಗೆ ತಲುಪಿಸಬೇಕೆಂಬ ಅವರ ಬದ್ಧತೆ, “ಅನ್‌ಹರ್ಡ್ ಎಕೋಸ್” ನ ಮೂಲಕ ಮುಂದುವರೆಸಿದ್ದಾರೆ. ಈ ಚಿತ್ರವು ಪ್ರೇಕ್ಷಕರ ಆಯ್ಕೆ ಬಹುಮಾನವನ್ನು ಸಹ ಪಡೆದುಕೊಂಡಿದ್ದು, ಅದರ ಬಲವಾದ ಭಾವನಾತ್ಮಕ ಸಂಪರ್ಕಕ್ಕೆ ಸಾಕ್ಷಿಯಾಗಿದೆ.

Advertisements

ಕ್ಷಮಾ ಅಂಬೆಕಲ್ಲು ಅವರ ಕಿರುಚಿತ್ರ “ಪುಷ್ಪ”, ವಿದ್ಯಾರ್ಥಿನಿ ನಿರ್ದೇಶಕಿ ಎಂಬ ವಿಶೇಷ ವರ್ಗದಲ್ಲಿ ನಗದು ಬಹುಮಾನ ಪಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಕ್ಷಮಾ, ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದಲ್ಲಿ ದೃಶ್ಯ ಸಂವಹನದಲ್ಲಿ ಬಿ.ಎಸ್ಸಿ. ಪದವಿ ಪಡೆಯುತ್ತಿದ್ದಾರೆ.

ಚೊಚ್ಚಲ ನಿರ್ದೇಶನದ ಇತರ ಮೂರು ಕಿರುಚಿತ್ರಗಳು ಸಹ ನಗದು ಬಹುಮಾನಗಳನ್ನು ಪಡೆದಿವೆ: ಮಂದಾರ ಬಟ್ಟಲಹಳ್ಳಿ ನಿರ್ದೇಶನದ ‘ದಿ ಲಾಸ್ಟ್ ಹ್ಯಾಪಿ ಕಸ್ಟಮರ್’ (2024), ಸಿಂಚನಾ ಶೈಲೇಶ್ ನಿರ್ದೇಶನದ ‘ಕೇಕ್‌ವಾಕ್'(2025) ಮತ್ತು ಸತ್ಯ ಪ್ರಮೋದ ಎಂ.ಎಸ್ ನಿರ್ದೇಶನದ ‘ಆನ್‌ಲೈನ್'(2025), ಹಾವೇರಿ ಜಿಲ್ಲೆಯ ರೈತ ಮಹಿಳೆ ರೇಣುಕಾ ಯಲ್ಲಪ್ಪ ಮಲ್ಲಿಗಾರ್ ನಿರ್ಮಿಸಿದ ‘ನೀರೆಲ್ಲವೂ ತೀರ್ಥ'(2025) ಎಂಬ ಕಿರುಚಿತ್ರವನ್ನು ಸ್ಪರ್ಧಾತ್ಮಕವಲ್ಲದ ವಿಭಾಗದಲ್ಲಿ ಪ್ರದರ್ಶಿಸಲಾಯಿತು.

ಚಿತ್ರೋತ್ಸವದ ಪ್ರಮುಖ ಆಕರ್ಷಣೆ, ಪತ್ರಕರ್ತೆ ಸುನಯನ ಸುರೇಶ್ ನಿರ್ವಹಿಸಿದ ಚರ್ಚಾಗೋಷ್ಠಿಯಲ್ಲಿ ‘ಕನ್ನಡ ಸಿನಿಮಾದಲ್ಲಿ ಮಹಿಳಾ ಧ್ವನಿ ‘ಯಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕಿ ರೂಪಾ ರಾವ್ (ಗಂಟು ಮೂಟೆ), ಟೆಂಟ್ ಸಿನೆಮಾ ಶಾಲೆಯ ಸ್ಥಾಪಕ ನಿರ್ದೇಶಕಿ ಶೋಭಾ ಸಿ.ಎಸ್. ಮತ್ತು ಮುಖ್ಯ ಅತಿಥಿ ಡಿ. ಸುಮನಾ ಕಿತ್ತೂರು ಭಾಗವಹಿಸಿದ್ದರು.

makers

ತಮ್ಮ ಜಾತಕಗಳು ಹೊಂದಿಕೆಯಾಗಲಿಲ್ಲ ಎಂಬ ಕಾರಣಕ್ಕೆ ತನ್ನ ಚಿತ್ರಕ್ಕೆ ಹಣಕಾಸು ಒದಗಿಸಲು ನಿರಾಕರಿಸಿದ ನಿರ್ಮಾಪಕರ ಬಗ್ಗೆ ಸುಮನ್ ಕಿತ್ತೂರು ಒಂದು ಸ್ವಾರಸ್ಯಕರ ಅನುಭವವನ್ನು ಹಂಚಿಕೊಂಡರು.

ರೂಪಾ ರಾವ್ ಅವರು ಚಲನಚಿತ್ರೋದ್ಯಮದಲ್ಲಿ ಎದುರಿಸಿದ ಲಿಂಗ ತಾರತಮ್ಯದ ಬಗ್ಗೆ ಮುಕ್ತವಾಗಿ ಮಾತನಾಡಿ, “ನಿರ್ಮಾಪಕರು ಮತ್ತು ವಿತರಕರು ನನ್ನನ್ನು ನೇರವಾಗಿ ಉದ್ದೇಶಿಸಿ ಮಾತನಾಡುವ ಬದಲು ನನ್ನ ಪುರುಷ ಸಹಾಯಕರೊಂದಿಗೆ ಮಾತನಾಡುತ್ತಿದ್ದರು. ಹಲವು ನಿರಾಕರಣೆಗಳು ಮತ್ತು ಆರ್ಥಿಕ ಸಂಕಷ್ಟಗಳ ನಡುವೆಯೂ ‘ಹುಚ್ಚು ಮತ್ತು ಉತ್ಸಾಹ’ ಇದ್ದರೆ ಮಾತ್ರ ಚಲನಚಿತ್ರ ನಿರ್ದೇಶಕರು ಮುಂದುವರೆಯಲು ಸಾಧ್ಯ” ಎಂದರು.

ಇದನ್ನು ಓದಿದ್ದೀರಾ? ಕಾಲ್ತುಳಿತದ ಹಿಂದೆ ಬಿಜೆಪಿ ಷಡ್ಯಂತ್ರ: ನ್ಯಾ.ಜಾನ್ ಮೈಕೆಲ್ ಕುನ್ಹಾ ಆಯೋಗಕ್ಕೆ ಕಾಂಗ್ರೆಸ್‌ ನಿಯೋಗದಿಂದ ದೂರು

‘ಇದು ಕೇವಲ ಕಿರುಚಿತ್ರ ಪ್ರದರ್ಶನವಲ್ಲ . ಮಹಿಳೆಯರ ಅನುಭವ, ದೃಷ್ಟಿಕೋನಗಳಿಗೆ ವೇದಿಕೆ ನೀಡುವ, ಲಿಂಗ ಸಮಾನತೆಯ ಚಿಂತನೆಗೆ ಉತ್ತೇಜನ ನೀಡುವ ಒಂದು ಚಳುವಳಿ’ ಎಂದು ಗುಬ್ಬಿವಾಣಿಯ ಸ್ಥಾಪಕ ಟ್ರಸ್ಟಿ ಮಾಲವಿಕಾ ತಿಳಿಸಿದರು.

‘ಈ ಉತ್ಸವದ ಮೊದಲ ಆವೃತ್ತಿಯ ಯಶಸ್ಸಿನಿಂದ ನಮಗೆ ತುಂಬಾ ಪ್ರೋತ್ಸಾಹ ಸಿಕ್ಕಿದೆ. ಮುಂದಿನ ವರ್ಷದಲ್ಲಿ ಕರ್ನಾಟಕದಾದ್ಯಂತ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ಚಿತ್ರೋತ್ಸವದ ನಿರ್ದೇಶಕಿ ಶಾಂತಲಾ ದಾಮ್ಲೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X