ಬೆಂಗಳೂರು | ಅತ್ಯಾಚಾರ ಎಸಗಿ, ನಗ್ನ ಫೋಟೊ ವಿಡಿಯೊ ಚಿತ್ರೀಕರಿಸಿದ್ದ ಬ್ಯಾಡ್ಮಿಂಟನ್ ತರಬೇತುದಾರ ಬಂಧನ

Date:

ಬ್ಯಾಡ್ಮಿಂಟನ್ ತರಬೇತಿಗೆ ಬರುತ್ತಿದ್ದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದ ಬ್ಯಾಡ್ಮಿಂಟನ್ ತರಬೇತುದಾರನನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

ತಮಿಳುನಾಡಿನ ಸುರೇಶ್ ಬಾಲಾಜಿ(26) ಬಂಧಿತ ಆರೋಪಿ. “ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ, ಆರೋಪಿಯ ವಿರುದ್ಧ ಪೋಕ್ಸೊ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಎಂಟು ದಿನ ಪೊಲೀಸ್ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ, ಆರೋಪಿಯ ಮೊಬೈಲ್‌ ಜಪ್ತಿ ಮಾಡಿಕೊಂಡು ಪರಿಶೀಲನೆ ನಡೆಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ 16 ವರ್ಷದ ಬಾಲಕಿ ಸೇರಿದಂತೆ ಎಂಟು ಬಾಲಕಿಯರ ನಗ್ನ ಫೋಟೊಗಳು ಹಾಗೂ ವಿಡಿಯೊಗಳು ಮೊಬೈಲ್‌ನಲ್ಲಿ ಪತ್ತೆಯಾಗಿವೆ” ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಕೆಲವು ವರ್ಷಗಳಿಂದ ಹುಳಿಮಾವು ಬಳಿ ವಾಸವಿದ್ದು, ಬ್ಯಾಡ್ಮಿಂಟನ್‌ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದ. ಆತ ಕೆಲಸ ಮಾಡುತ್ತಿದ್ದ ಕೋಚಿಂಗ್‌ ಕೇಂದ್ರಕ್ಕೆ ಎರಡು ವರ್ಷಗಳ ಹಿಂದೆ ಬಾಲಕಿ ಬ್ಯಾಡ್ಮಿಂಟನ್‌ ತರಬೇತಿಗೆ ಸೇರಿಕೊಂಡಿದ್ದಳು. ಆಕೆಯ ಸ್ನೇಹ ಸಂಪಾದಿಸಿದ್ದ ಆರೋಪಿ, ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಅಲ್ಲದೇ ಯಾರಿಗೂ ವಿಷಯ ತಿಳಿಸದಂತೆ ಬೆದರಿಕೆ ಹಾಕಿದ್ದ” ಎಂದು ತಿಳಿದುಬಂದಿದೆ.

“ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಳಿಕ ಬಾಲಕಿ ಅಜ್ಜಿಯ ಮನೆಗೆ ತೆರಳಿದ್ದಳು. ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಅಜ್ಜಿಯ ಮೊಬೈಲ್‌ಗೆ ನಗ್ನ ಫೋಟೊಗಳು ರವಾನೆ ಆಗಿದ್ದವು. ಅದನ್ನು ಗಮನಿಸಿದ ಅಜ್ಜಿ, ತಕ್ಷಣ ಸಂತ್ರಸ್ತೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಬಾಲಕಿಯ ತಾಯಿಯು ಮಗಳನ್ನು ವಿಚಾರಿಸಿದಾಗ ತರಬೇತುದಾರ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಳು. ಪೋಷಕರು ನೀಡಿದ ದೂರು ಆದರಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಇದೀಗ ಆರೋಪಿಯನ್ನು ಬಂಧಿಸಲಾಗಿದೆ” ಎಂದು ಪೊಲೀಸರು ಹೇಳಿರುವುದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್‌ನಿಂದ​ ಅತ್ಯಾಚಾರ; 8 ಅಪ್ರಾಪ್ತೆಯರ ಮೇಲೂ ಲೈಂಗಿಕ ದೌರ್ಜನ್ಯ

“ನೃತ್ಯ ತರಬೇತಿ ಹಾಗೂ ಮನೆಪಾಠಕ್ಕೆ ಬಾಲಕಿ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಆರೋಪಿ ಮನೆಗೆ ಕರೆದೊಯ್ಯುತ್ತಿದ್ದ. ಲೈಂಗಿಕ ದೌರ್ಜನ್ಯ ಎಸಗಿ ಫೋಟೊ, ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ” ಎಂದು ಮೂಲಗಳು ತಿಳಿಸಿವೆ

“ಬ್ಯಾಡ್ಮಿಂಟನ್‌ ತರಬೇತಿಗೆ ಬರುತ್ತಿದ್ದ ಬಾಲಕಿಯರ ಸ್ನೇಹ ಗಳಿಸುತ್ತಿದ್ದ ಆರೋಪಿ, ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಆ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕುತ್ತಿದ್ದ. ಆರೋಪಿ ಬೆದರಿಕೆ ಹಾಕಿದ್ದರಿಂದ ಯಾರೂ ಬಾಯ್ಬಿಟ್ಟಿರಲಿಲ್ಲ” ಎಂಬ ಮಾಹಿತಿ ಈಗ ಬಹಿರಂಗವಾಗಿದೆ.

“ಆರೋಪಿ ರಸ್ತೆಯಲ್ಲಿ ಓಡಾಡುವಾಗ ಮಹಿಳೆಯರ ಜತೆಗೆ ದುರ್ವರ್ತನೆ ತೋರುತ್ತಿದ್ದ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಹಿಂಭಾಗ ಸ್ಪರ್ಶಿಸಿ ಪರಾರಿಯಾಗುತ್ತಿದ್ದ. ಅದನ್ನು ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ” ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...