ಬೆಂಗಳೂರು | ₹106 ಕೋಟಿ ವೆಚ್ಚದ ಹೈಟೆಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯೇ ಇಲ್ಲ!

Date:

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ₹106 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೂ ಸದ್ಯ ಸಿಬ್ಬಂದಿ ಕೊರತೆಯಿಂದ ನಿಷ್ಕ್ರಿಯವಾಗಿದೆ.

- Advertisement -

ಸದ್ಯ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ (ಓಪಿಡಿ) ಮಾತ್ರ ಕಾರ್ಯನಿರ್ವಹಿಸುತ್ತಿದೆ. ಈ ಆಸ್ಪತ್ರೆ ಗೋವಿಂದರಾಜನಗರ ಕ್ಷೇತ್ರ ಅಗ್ರಹಾರ ದಾಸರಹಳ್ಳಿ ವಾರ್ಡ್‌ನ ಎಂ.ಸಿ ಲೇಔಟ್‌ನಲ್ಲಿದೆ. ಈ ಹೈಟೆಕ್ ಆಸ್ಪತ್ರೆಗೆ ಆದಿಚುಂಚನಗಿರಿ ಪೀಠಾಧಿಪತಿ ಬಾಲಗಂಗಾಧರ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಎಂದು ಹೆಸರಿಡಲಾಗಿದೆ. ಫೆ.16ರಂದು ಅದಿಚುಂಚನಗಿರಿ ಶ್ರೀಗಳು ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದ್ದರು. 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇದಾಗಿದ್ದು, ಎಲ್ಲ ಹೈಟೆಕ್ ಸೌಲಭ್ಯವಿದೆ.‌ ನೆಲಮಹಡಿ ಸೇರಿದಂತೆ ನಾಲ್ಕು ಅಂತಸ್ತಿನ‌ ಆಸ್ಪತ್ರೆ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಆಸ್ಪತ್ರೆಯೂ ಲೋಕಾರ್ಪಣೆಯಾಗಿ 9 ತಿಂಗಳು ಕಳೆದಿವೆ. ಆದರೂ, ಈ ಆಸ್ಪತ್ರೆಯಿಂದ ಜನರಿಗೆ ಎಲ್ಲ ರೀತಿಯ ಚಿಕಿತ್ಸೆ ಸಿಗುತ್ತಿಲ್ಲ. ಆಸ್ಪತ್ರೆಗೆ ಎಲ್ಲ ಉಪಕರಣ ಬಂದಿದ್ದರು, ವೈದ್ಯರ, ದಾದಿಯರ, ಸಿಬ್ಬಂದಿಗಳ ಕೊರತೆ ಎದುರಾಗಿದೆ.

ಕೋಟಿ ಕೋಟಿ ಖರ್ಚು ಮಾಡಿ, ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಿದರೂ ಜನರಿಗೆ ಉಪಯೋಗಕ್ಕೆ ಸಿಗುತ್ತಿಲ್ಲ ಎಂದು ಗೋವಿಂದರಾಜನಗರದ ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯಕ್ಕೆ, ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ(ಓಪಿಡಿ) ಮಾತ್ರ ಕಾರ್ಯನಿರ್ವಹಿಸುತ್ತಿದೆ. ಈಗ ಇರುವ ಸೌಲಭ್ಯವನ್ನು ಬಿಟ್ಟು, ಇನ್ನು ಆಸ್ಪತ್ರೆಗೆ 300 ಹಾಸಿಗೆಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಆದರೆ, ಇನ್ನೂ ಆಸ್ಪತ್ರೆಯ ಬಹುತೇಕ ಹಾಸಿಗೆಗಳು ಖಾಲಿಯಾಗಿಯೇ ಉಳಿದಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ (ಆರೋಗ್ಯ) ಡಾ ಕೆ ವಿ ತ್ರಿಲೋಕ್ ಚಂದ್ರ ಮಾತನಾಡಿ, “ಸದ್ಯ ವೈದ್ಯರ ಕೊರತೆ ಇದೆ. ಆಸ್ಪತ್ರೆಗೆ 17 ವಿಶೇಷ ವೈದ್ಯರ ನಿಯೋಜನೆಗೆ ವಿನಂತಿಸಲಾಗಿದೆ. ಆಸ್ಪತ್ರೆಯಲ್ಲಿ ಓಪಿಡಿ ಸೇವೆ ನಿರ್ವಹಿಸುತ್ತಿದೆ. ಆಸ್ಪತ್ರೆಯು ಎಲ್ಲ ಅಗತ್ಯ ಮೂಲಸೌಕರ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆ. ನಾವು ಆರೋಗ್ಯ ಇಲಾಖೆಯಿಂದ ಹೆಚ್ಚುವರಿ ಬೆಂಬಲವನ್ನು ಕೋರಿದ್ದೇವೆ” ಎಂದರು.

ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರು ಮಾತನಾಡಿ, “ವೈದ್ಯರು ಹಾಗೂ ಅಗತ್ಯ ಔಷಧಿಗಳ ಕೊರತೆಯಿದೆ. ಇದರಿಂದ ರೋಗಿಗಳಿಗೆ ಸಮಸ್ಯೆ ಆಗುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಆಸ್ಪತ್ರೆ ಪ್ರೇತ ಕಟ್ಟಡವಾಗಿ ಮಾರ್ಪಾಡಾಗಿದೆ. ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ ₹48 ಕೋಟಿ ಇದೆ ಎಂದು ಬಿಬಿಎಂಪಿ ಅಂದಾಜಿಸಿದೆ. ಹಾಗಾಗಿ, ಆರೋಗ್ಯ ಇಲಾಖೆಯು ಅದರ ಜವಾಬ್ದಾರಿಯನ್ನು ತೆಗೆದುಕ್ಕೊಳ್ಳಬೇಕು. ಈ ಆಸ್ಪತ್ರೆಯು ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಗಳಂತೆ ಜನರಿಗೆ ಸಮೀಪದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವಂತಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೋಷಕರ ಮೇಲೆ ದ್ವೇಷ; ಬಾಲಕಿ ಮೇಲೆ ನಾಯಿ ಛೂ ಬಿಟ್ಟ ದುರುಳ

ಪ್ರಯೋಗಾಲಯಗಳು, ರೇಡಿಯಾಲಜಿ, ರಕ್ತ ಸಂಗ್ರಹಣೆ, ತುರ್ತು ವಿಭಾಗ, ಫಾರ್ಮಸಿ, ಮೈನರ್ ಆಪರೇಷನ್ ಥಿಯೇಟರ್‌ಗಳು, ಹೆರಿಗೆ, ಮಕ್ಕಳ ಆರೈಕೆ, ಕೀಮೋಥೆರಪಿ, ಮೂಳೆಚಿಕಿತ್ಸೆ, ದಂತ ಸೇವೆಗಳು, ನೇತ್ರವಿಜ್ಞಾನ ಮತ್ತು ಸಾಮಾನ್ಯ ವಾರ್ಡ್ ಸೌಲಭ್ಯಗಳು ಸೇರಿದಂತೆ ಅಗತ್ಯ ಸೇವೆಗಳ ಶ್ರೇಣಿಯನ್ನು ಆಯೋಜಿಸಲು ಈ ಆಸ್ಪತ್ರೆಯನ್ನು ವಿನ್ಯಾಸಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...