ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಇದೇ ಫೆಬ್ರವರಿ 26ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಒಂದು ವೇಳೆ ಆದೇಶ ಉಲ್ಲಂಘಿಸಿದ್ದು ಕಂಡುಬಂದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.
ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಜಲಮಂಡಳಿ ಸುಪರ್ದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಹಸ್ತಾಂತರ
ಯಲಹಂಕದಲ್ಲಿ ನಡೆದ ಏರ್ ಶೋ-2025ರ ಪ್ರಯುಕ್ತ ಫೆ.17ರವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿತ್ತು. ಏರ್‌ಪೋರ್ಸ್ ಸ್ಟೇಷನ್‌ನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲ ಮಾಂಸ ಮಾರಾಟದ ಅಂಗಡಿಗಳನ್ನು ಮುಚ್ಚಬೇಕು ಹಾಗೂ ಹೋಟೆಲ್, ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧ ಮಾಡಲಾಗಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದೀಗ ಹಬ್ಬದ ಹಿನ್ನೆಲೆ ಮತ್ತೊಮ್ಮೆ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
