ಬೆಂಗಳೂರು | ನೇಮಕಾತಿ ಆದೇಶ ನೀಡುವಂತೆ ಸಿಎಂಗೆ ಬರಗೂರು ರಾಮಚಂದ್ರಪ್ಪ ಕರೆ

Date:

2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೀಘ್ರವಾಗಿ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದರು.

- Advertisement -

ಬೆಂಗಳೂರು ನಗರದ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ಭೇಟಿ ಮಾಡಿದ ಬಳಿಕ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನೇಮಕಾತಿ ಅನಗತ್ಯವಾಗಿ ವಿಳಂಬವಾಗುತ್ತಿದೆ. ಮೂರು ವರ್ಷಗಳು ಮುಗಿದರೂ ನೇಮಕಾತಿ ಆದೇಶ ಬಂದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳೆಲ್ಲರೂ ಆದೇಶ ಪ್ರತಿಗಾಗಿ ಕಾಯುತ್ತಿದ್ದೇವೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ” ಎಂದು ಅಭ್ಯರ್ಥಿಗಳು ಕೆಲವು ಅಂಶಗಳನ್ನು ಬರಗೂರು ಅವರಲ್ಲಿ ಹಂಚಿಕೊಂಡರು.

“ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ-2021ರ ನೇಮಕಾತಿ ಅಧಿಸೂಚನೆ 2021ರ ಸಪ್ಟೆಂಬರ್‌ನಲ್ಲಿ ನಡೆದಿದ್ದು, 2022ರ ಮಾರ್ಚ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಮುಗಿದು, 2023 ಫೆಬ್ರವರಿಯಲ್ಲಿ ಅಂತಿಮ ಆಯ್ಕೆಪಟ್ಟಿ ಪ್ರಕಟವಾಗಿ, ಅಂತಿಮ ಆಯ್ಕೆಪಟ್ಟಿಯು 2023ರ ನವೆಂಬರ್‌ 4ರಂದು ವಿಶೇಷ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ಸದರಿ ನೇಮಕಾತಿಗೆ ಸಂಬಂಧಿಸಿದಂತಹ ಪೊಲೀಸ್ ಮತ್ತು ಮೆಡಿಕಲ್ ವೆರಿಫಿಕೇಶನ್, ಸಿಂಧುತ್ವ ಪ್ರಮಾಣ ಪತ್ರ, ಅಂಕಪಟ್ಟಿಗಳ ನೈಜತೆಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು ಶೇ.90ರಷ್ಟು ಪೂರ್ಣವಾಗಿ, ಆ ಪ್ರಮಾಣ ಪತ್ರಗಳನ್ನೂ ಸರ್ಕಾರ ಅನುಮೋದಿಸಿದೆ” ಎಂದು ಹೇಳಿಕೊಂಡರು.

“ಹೈದರಾಬಾದ್ ಕರ್ನಾಟಕ ವಿಭಾಗದ ಮೀಸಲಾತಿ ವಿಷಯವಾಗಿ ಬಂದಂತಹ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ/03/ಹೈಕಕೋ/2019ನ್ನು 2023ರ ಫೆಬ್ರವರಿ 01ರಂದು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು ಎತ್ತಿಹಿಡಿದಿದ್ದು, ಇದೇ ವಿಷಯವಾಗಿ 2024ರ ಮಾರ್ಚ್ 13ರಂದು ಉಚ್ಛನ್ಯಾಯಾಲಯದ ಮಧ್ಯಂತರ ತೀರ್ಪು ಕೂಡಾ ಕೌನ್ಸೆಲಿಂಗ್‌ ನಡೆಸಿ, ಸ್ಥಳನಿಯುಕ್ತಿ ಮಾಡಬಹುದೆಂದು ಆದೇಶ ನೀಡಿದೆ” ಎಂದರು.

“ಈ ಆದೇಶಾನುಸಾರ ಸರ್ಕಾರವು ಈಗಾಗಲೇ ಕೆಪಿಟಿಸಿಎಲ್‌ ಇಲಾಖೆಯ ಎಇ ಹುದ್ದೆಗಳಿಗೆ, ಪ್ರಾಥಮಿಕ ಶಾಲಾ ಸಾಕ್ಷರತಾ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗಳಿಗೆ, (ಜಿಪಿಎಸ್‌ಟಿಆರ್) ಪಿಡಬ್ಲ್ಯೂಡಿ ಇಲಾಖೆಯ ಸಹಾಯಕ ಎಂಜಿನಿಯರ್ ಹುದ್ದೆಗಳಿಗೆ ಮತ್ತು ಆರ್‌ಡಿಪಿಆರ್ ಇಲಾಖೆಯ ಎಇ ಹುದ್ದೆಗಳಿಗೆ ಷರತ್ತುಬದ್ಧ ನೇಮಕಾತಿ ಆದೇಶವನ್ನು ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಸತಿನಿಲಯಗಳಲ್ಲಿ ಸಿಬ್ಬಂದಿ ಕಡಿತ; ಸರ್ಕಾರದ ಆದೇಶ ಹಿಂಪಡೆಯುವಂತೆ ಆಗ್ರಹ

“ಎಲ್ಲಾ ಉದಾಹರಣೆಗಳು ಇದ್ದಾಗ್ಯೂ, ಎರಡು ಬಾರಿ ತಾತ್ಕಾಲಿಕ ವರ್ಗಾವಣೆ ಮತ್ತು ಸ್ಥಳನಿಯುಕ್ತಿಯ ವೇಳಾಪಟ್ಟಿ ಪ್ರಕಟಿಸಿ, ಹಿಂಪಡೆದಿರುತ್ತಾರೆ. ಜತೆಗೆ ಉನ್ನತ ಶಿಕ್ಷಣ ಸಚಿವರು ಅನಗತ್ಯ ಕಾರಣಗಳನ್ನು ನೀಡುತ್ತಿದ್ದಾರೆ. ಕೂಡಲೇ ಸಮಸ್ಯೆಗಳನ್ನೇ ಮುಂದಿಟ್ಟುಕೊಂಡು ನೆಪ ಹೇಳದೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ 1208 ಮಂದಿ ಅಭ್ಯರ್ಥಿಗಳಿಗೂ ಷರತ್ತುಬದ್ಧ ನೇಮಕಾತಿ ಆದೇಶ ನೀಡಲು ಅಭ್ಯರ್ಥಿಗಳ ಪರವಾಗಿ ತಾವು ಸರ್ಕಾರಕ್ಕೆ ಆಗ್ರಹಿಸಬೇಕು” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಲ್ಲಿ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...