ಬೆಂಗಳೂರು | ಖಾಸಗಿ ವಿಡಿಯೋ ಚಿತ್ರಿಸಿ ಪತಿಯಿಂದಲೇ ಪತ್ನಿಗೆ ಬ್ಲಾಕ್‌ಮೇಲ್; ಪ್ರಕರಣ ದಾಖಲು

Date:

Advertisements

ವಿಕೃತ ಮನಸ್ಸಿನ ದುರುಳ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ, ಹಣ ಕೊಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್‌ ಮಾಡಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ತನ್ನ ಪತಿಯ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. “ತನ್ನ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿಕೊಂಡು ತನ್ನ ಪತಿಯೇ ಹಣಕ್ಕಾಗಿ ತನಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದಾನೆ. 10 ಲಕ್ಷ ರೂ. ಹಣ ಮತ್ತು ತಿಂಗಳ ವೇತನವನ್ನು ತನಗೆ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

“2022ರ ನವೆಂಬರ್‌ನಲ್ಲಿ ವಿವಾಹವಾಗಿದ್ದೆವು. ಹನಿಮೂನ್‌ಗಾಗಿ ಥಾಯ್ಲೆಂಡ್‌ಗೆ ಹೋಗಿದ್ದಾಗ ಅಶ್ಲೀಲ ವಿಡಿಯೋಗಳನ್ನು ತೋರಿಸಿ, ವಿಡಿಯೋದಲ್ಲಿರುವ ರೀತಿ ತನ್ನೊಂದಿಗೆ ನಡೆದುಕೊಳ್ಳುವಂತೆ ಕಿರುಕುಳ ನೀಡಿದ್ದ. ಬಲವಂತವಾಗಿ ಮದ್ಯಪಾನ ಮಾಡಿಸಿದ್ದ. ಅಲ್ಲದೆ, ಚಿಕ್ಕಮಗಳೂರಿನಲ್ಲಿರುವ ತವರು ಮನೆಗೆ ಹೋಗಿದ್ದಾಗ ನನ್ನ ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದ. ಆ ವಿಡಿಯೋವನ್ನು ತೋರಿಸಿ ಬ್ಲಾಕ್‌ ಮೇಲ್ ಮಾಡುತ್ತಿದ್ದಾನೆ” ಎಂದು 28 ವರ್ಷದ ಆಕೆ ವಿವರಿಸಿದ್ದಾರೆ.

Advertisements

ಅಲ್ಲದೆ, “ವಿವಾಹಕ್ಕೂ ಮೊದಲು ತಾನು ಸ್ವಂತ ಕಂಪನಿ ಹೊಂದಿದ್ದೇನೆಂದು ಪತಿ ಸುಳ್ಳು ಹೇಳಿದ್ದ. ವಿವಾಹವಾದ ಕೆಲ ದಿನಗಳ ನಂತರ ಆರೋಪಿ ನಿರುದ್ಯೋಗಿ ಎಂಬುದು ಗೊತ್ತಾಯಿತು. ಪ್ರಶ್ನಿಸಿದರೆ ಸರಿಯಾಗಿ ಉತ್ತರಿಸಲಿಲ್ಲ. ಬದಲಾಗಿ, ನನ್ನ ವೇತನ ಮತ್ತು 10 ಲಕ್ಷ ರೂ. ಕೊಡಬೇಕೆಂದು ಕಿರುಕುಳ ನೀಡುತ್ತಿದ್ದ. ಕೊಡದಿದ್ದರೆ, ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X