ಬೆಂಗಳೂರು | ಮೆಟ್ರೋ ರೈಲಿನಲ್ಲಿ ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ದಂಡ ವಿಧಿಸಿದ ಬಿಎಂಆರ್‌ಸಿಎಲ್‌

Date:

ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕಳೆದ ಕೆಲವು ದಿನಗಳಿಂದ ಒಂದಿಲ್ಲೊಂದು ವಿಚಾರಗಳಿಂದ ಸುದ್ದಿಯಲ್ಲಿದೆ. ಈ ಹಿಂದೆ ವಿದೇಶಿ ಯುಟ್ಯೂಬರ್‌ವೊಬ್ಬರು ನಮ್ಮ ಮೆಟ್ರೋ ರೈಲಿನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುವುದು ಹೇಗೆ? ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಘಟನೆ ನಂತರ ಓರ್ವ ವ್ಯಕ್ತಿ ರೈಲಿನಲ್ಲಿ ಕುಳಿತು ಗೋಬಿ ಮಂಚೂರಿ ತಿನ್ನುತ್ತಿದ್ದು ಸುದ್ದಿ ಆಗಿತ್ತು. ಇದೀಗ ಮೆಟ್ರೋ ರೈಲಿನ ಹ್ಯಾಂಡಲ್ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಯೋರ್ವನಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ದಂಡ ವಿಧಿಸಿದೆ.

- Advertisement -

ನಮ್ಮ ಮೆಟ್ರೋದಲ್ಲಿ ನಿತ್ಯ 7 ಲಕ್ಷ ಜನ ಪ್ರಯಾಣಿಸುತ್ತಾರೆ. ನಮ್ಮ ಮೆಟ್ರೋ ಸ್ವಚ್ಛತೆಗೆ ಸಾಕ್ಷಿಯಾಗಿದ್ದು, ಅದನ್ನು ಕಾಪಾಡಿಕೊಳ್ಳಲು ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಕೆಲವು ನಿಯಮಗಳನ್ನು ರೂಪಿಸಿದೆ. ನಿಯಮಗಳನ್ನು ಉಲ್ಲಂಘನೆ ಮಾಡಿ ಉದ್ಧಟತನ ತೋರುವ ಜನರಿಗೆ ದಂಡ ಕೂಡ ವಿಧಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಇದೀಗ ರೈಲಿನ ಹ್ಯಾಂಡಲ್‌ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ ವಿದ್ಯಾರ್ಥಿಗೆ ₹500 ದಂಡ ವಿಧಿಸಿ ಜತೆಗೆ ಮುಂದೆ ಈ ರೀತಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಕೈಗೆ ಕೋಳ ಹಾಕಿದ್ದರೂ ಪೊಲೀಸರ ಮುಂದೆ ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿಶೀಟರ್

ಏನಿದು ಘಟನೆ?

ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಸೇರಿ ಕಳೆದ ಮಂಗಳವಾರ ರಾತ್ರಿ ಸುಮಾರು 11 ಗಂಟೆಗೆ ದಾಸರಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿ ಯಲಚೇನಹಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಜೆಪಿ ನಗರ ಮೆಟ್ರೋ ನಿಲ್ದಾಣ ದಾಟಿದ ಬಳಿಕ ಮೂವರ ಪೈಕಿ ಓರ್ವ ವಿದ್ಯಾರ್ಥಿ, ರೈಲಿನಲ್ಲಿ ನಿಂತ ಪ್ರಯಾಣಿಕರು ಹಿಡಿದುಕೊಳ್ಳುವ ಹ್ಯಾಂಡಲ್‌ ಹಿಡಿದು ಬ್ಯಾಕ್‌ಫ್ಲಿಪ್‌ ಮಾಡಿದ್ದಾನೆ.

ಈ ವೇಳೆ, ಆತನ ಉಳಿದ ಸ್ನೇಹಿತರು ವಿಡಿಯೋ ಮಾಡಿದ್ದಾರೆ. ವಿದ್ಯಾರ್ಥಿಗಳ ಈ ಹುಚ್ಚಾಟ ಪ್ರಯಾಣಿಕರಿಗೆ ಕಿರಿಕಿರಿ ಮತ್ತು ಕೋಪ ತರಿಸಿದೆ. ಪ್ರಯಾಣಿಕರು ವಿಡಿಯೋ ಮಾಡಿ ಬಿಎಂಆರ್‌ಸಿಎಲ್‌ ಸಿಬ್ಬಂದಿಗೆ ರವಾನೆ ಮಾಡಿದ್ದಾರೆ.

ಸಿಬ್ಬಂದಿ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿ ಮೆಟ್ರೋಯಿಂದ ಹೊರ ಹೋಗುವ ವೇಳೆ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ...

ಬಾಗಲಕೋಟೆ | 77 ಪ್ರಕರಣ ದಾಖಲು, 53 ವಾಹನ ಜಪ್ತಿ; 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ...

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ....

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...