ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು; ಚಾಲಕನ ಬಂಧನ

Date:

ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ವರದಿಯಾಗಿದೆ.

- Advertisement -

ಕುಸುಮಿತಾ(21) ಎಂಬುವರನ್ನು ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ, ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ತಮ್ಮ ನಿವಾಸದಿಂದ ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದೇ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಹಿಂಬದಿಯಿಂದ ಢಿಕ್ಕಿ ಹೊಡೆದು ಕುಸುಮಿತಾ ಅವರು ಕೆಳಗೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ವರದಿಯಾಗಿದೆ. ಘಟನೆಯ ದೃಶ್ಯಾವಳಿಯು ಬಿಎಂಟಿಸಿ ಬಸ್‌ನೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ನಗರದ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಚಾಲಕನನ್ನು ಬಂಧಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಪೂರ್ವ ಟ್ರಾಫಿಕ್ ಪೊಲೀಸ್ ಉಪ ಕಮಿಷನರ್ ಸಾರಾ ಫಾತಿಮಾ, “8.30 ರ ಸುಮಾರಿಗೆ ಕುಸುಮಿತಾ ಕಾಲೇಜಿಗೆ ತೆರಳುತ್ತಿದ್ದಾಗ ಬಸ್ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸ್ವಲ್ಪ ದೂರದವರೆಗೆ ಎಳೆದೊಯ್ದಿದೆ. ಬಸ್ ವಿದ್ಯಾರ್ಥಿನಿಯ ಮೇಲೆ ಹರಿದಿರಲಿಲ್ಲ. ತೀವ್ರ ಗಾಯಗೊಂಡಿದ್ದರಿಂದ ಮೃತಪಟ್ಟಿದ್ದಾರೆ. ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...