ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಶಾಂತಿ ನಗರ ಬಳಿಯ ಸುಬ್ಬಯ್ಯ ವೃತ್ತದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಬ್ಬನ್‌ಪೇಟೆ ನಿವಾಸಿ ಪುಷ್ಪಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಹಿಳೆಯ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅಪಘಾತ ಎಸಗಿದ ಬಿಎಂಟಿಸಿ ಬಸ್ ಚಾಲಕ ನಾಗರಾಜ್ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಲಕನ್ನು ವಿಚಾರಣೆ ಒಳಪಡಿಸಿದ್ದಾರೆ. ಅಲ್ಲದೆ, ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದುಕೊಂಡು, ಪರಿಶೀಲನೆ ನಡೆಸುತ್ತಿದ್ದಾರೆ.