ಬೆಂಗಳೂರು | ಮುರಿದು ಬಿದ್ದ ಬಿಬಿಎಂಪಿ ಮೈದಾನದ ಗೇಟ್ : ಬಾಲಕ ಮೃತ್ಯು

Date:

ಬಿಬಿಎಂಪಿ ಮೈದಾನದ ಗೇಟ್ ಮುರಿದು ತಲೆಗೆ ಬಿದ್ದು ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.

- Advertisement -

ಘಟನೆಯಿಂದ ಮೃತಪಟ್ಟ ಬಾಲಕನನ್ನು ನಿರಂಜನ್ (10) ಎಂದು ಗುರುತಿಸಲಾಗಿದೆ. ಭಾನುವಾರ ರಜಾದಿನವಾದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಮೈದಾನಕ್ಕೆ ಆಟವಾಡಲೆಂದು ಸಂಜೆ 4 ಗಂಟೆ ಸುಮಾರಿಗೆ ಬಂದಿದ್ದು, ಈ ವೇಳೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2024 09 22 at 7.07.29 PM

ಆಟವಾಡಲು ಮೈದಾನಕ್ಕೆ ಬಂದಿದ್ದ ನಿರಂಜನ್, ಗೇಟ್ ಬಳಿಯೇ ನಿಂತಿದ್ದನು. ಗೇಟ್ ತೆರೆಯುತ್ತಿದ್ದಂತೆ ಆತನ ತಲೆ ಮೇಲೆ ಮುರಿದು ಬಿದ್ದಿದೆ. ಪರಿಣಾಮವಾಗಿ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ

ಮೃತಪಟ್ಟಿರುವ ಬಾಲಕ ನಿರಂಜನ್ ಮಲ್ಲೇಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಮಲ್ಲೇಶ್ವರಂನ ಪೈಪ್‌ಲೈನ್‌ ಪ್ರದೇಶದಲ್ಲಿ ವಾಸವಾಗಿದ್ದ ಆಟೋ ಚಾಲಕ ವಿಜಯ್‌ ಕುಮಾರ್ ಮತ್ತು ಪ್ರಿಯಾ ದಂಪತಿಯ ಮೊದಲನೇ ಪುತ್ರ ಈತ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಗನನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...