ಬೆಂಗಳೂರು | ಶರಣ ನುಲಿಯ ಚಂದಯ್ಯನವರ ಜಯಂತಿ ಆಚರಿಸಲು ಕರೆ: ಎಂ.ವೆಂಕಟೇಶ್

Date:

ದಾಸೋಹ ಜ್ಞಾನಿ ಶ್ರೀ ಶರಣ ನುಲಿಯ ಚಂದಯ್ಯನವರ 915ನೇ ಜಯಂತಿಯನ್ನು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡುವಂತೆ ಶರಣ ನುಲಿಯ ಚಂದಯ್ಯ ಜಯಂತಿ ಆಚರಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟೇಶ್ ಕರೆ ನೀಡಿದ್ದಾರೆ.

- Advertisement -

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನುಲಿಯನ್ನು ನೂಲುವ ವೃತ್ತಿಯನ್ನು ಮಾಡುತ್ತಿದ್ದ ವಚನಕಾರ ಚಂದಯ್ಯನನ್ನು ರಾಜ್ಯದಲ್ಲಿ ನೆಲೆಸಿದ ಕುಳುವ ಸಮುದಾಯ ತನ್ನ ಮೂಲಪುರುಷನೆಂದು ಗುರುತಿಸಿಕೊಂಡಿದೆ. ಚಂದಯ್ಯನು ಕಲ್ಯಾಣದಲ್ಲಿ ಮೆದೆಹುಲ್ಲಿನಿಂದ ಮಾಡಿದ ನುಲಿಯನ್ನು ಹೊಸೆದು ಹಗ್ಗ ಕಣ್ಣಿ ಮಾಡಿ ಮಾರಿ ಬದುಕುವ ಕಾಯಕ ಜೀವಿಯಾಗಿದ್ದ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಚಂದಯ್ಯ ಬಸವಣ್ಣರ ಸಮಕಾಲೀನರು. ಚಂದಯ್ಯ ಕಟ್ಟಿಕೊಂಡಿದ್ದ ಲಿಂಗವು ಆತ ಒಮ್ಮೆ ಹುಲ್ಲು ಕೊಯ್ಯುವಾಗ ನೀರಲ್ಲಿ ಬೀಳುತ್ತದೆ. ಆದರೂ ಅವನು ಅದನ್ನು ಎತ್ತಿಕೊಳ್ಳದೆ ಹುಲ್ಲಿನ ಹೊರೆ ಹೊತ್ತು ನಡೆದುಬಿಡುತ್ತಾನೆ. ಕಾಯಕದಲ್ಲಿ ದೇವರನ್ನು ಕಾಣುವ ಚಂದಯ್ಯನಿಗೆ ತಾನು ಕಟ್ಟಿಕೊಂಡಿದ್ದ ಲಿಂಗ ಸಂಕೇತವಷ್ಟೆ. ಯುದ್ಧಕ್ಕೆ ಹೊರಟ ಸೈನಿಕ ಮನೆಯ ಹಂಗು ತೊರೆದಂತೆ, ದೇವರ ಮೇಲೆ ಭಕ್ತಿ ಇಟ್ಟವ ವ್ಯಕ್ತಿಗತ ಸುಖ, ಸಂಪತ್ತನ್ನು ತೊರೆಯಬೇಕು. ಹೀಗೆ ತೊರೆಯದವರನ್ನು ‘ಚಂದೇಶ್ವರ’ ಮೆಚ್ಚಲಾರ ಎಂದು ಚಂದಯ್ಯ ವಚನ ಕಟ್ಟಿದ್ದಾನೆ ಎಂದು ಅವರು ತಿಳಿಸಿದರು.

ಕಾಯಕದಿಂದ ಬಂದುದು ಮಾತ್ರ ಲಿಂಗ ಜಂಗಮಕ್ಕೆ ಅರ್ಪಿತವಾಗಬೇಕು. ಈ ಕಾಯಕ ಗುರು, ಲಿಂಗ ಜಂಗಮರೆಲ್ಲರಿಗೂ ಕಡ್ಡಾಯವೆಂದು ಸಾರಿದ್ದಾರೆ. ಕಾಯಕ, ದಾಸೋಹ ಮತ್ತು ಸತ್ಯನಿಷ್ಠೆಯ ಮೂಲಕ ವಿಶ್ವ ಮಾನವ ಕೋಟಿಗೆ ಅರಿವಿನ ಬೆಳಕನ್ನು ನೀಡಿದ ಶರಣರ ಪೈಕಿ ನುಲಿಯ ಚಂದಯ್ಯನವರು ಪ್ರಮುಖರಾಗಿದ್ದಾರೆ. ಆದುದರಿಂದ ಸೆಪ್ಟಂಬರ್ 16ರಂದು ರಾಜ್ಯದ ಕುಳುವ, ಕೊರಮ ಹಾಗೂ ಕೊರಚ ಸಮುದಾಯದವರು ನುಲಿಯ ಚಂದಯ್ಯನ ಜನ್ಮದಿನಾಚರಣೆಯನ್ನು ಎಲ್ಲ ಜಿಲ್ಲೆಗಳಲ್ಲಿ ಅರ್ಥಪೂರ್ಣವಾಗಿ ಆಚರಿಸಿ, ಸಮಾಜಕ್ಕೆ ಅವರ ಸಂದೇಶಗಳನ್ನು ಸಾರಬೇಕು ಎಂದು ವೆಂಕಟೇಶ್ ಕರೆ ನೀಡಿದರು.

ಇದನ್ನು ಓದಿದ್ದೀರಾ? ‘ಮನೆ-ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವರಿಂದ ಚಾಲನೆ: ಏನಿದು ಯೋಜನೆ?

ಸುದ್ದಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ, ಮಾಜಿ ಶಾಸಕ ಜಿ.ಚಂದ್ರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...