ಬೆಂಗಳೂರು | ₹5.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು; 10 ಡ್ರಗ್ ಪೆಡ್ಲರ್​ಗಳ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟಗಾರರು ಮತ್ತು ವ್ಯಸನಿಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬೃಹತ್ ಡ್ರಗ್ಸ್‌ ಜಾಲ ಪತ್ತೆ ಹಚ್ಚಿದ್ದಾರೆ. 8 ಮಂದಿ ವಿದೇಶಿಗರು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ ₹5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಕಳೆದ 15 ದಿನಗಳಲ್ಲಿ ಕಾಡುಗೋಡಿ, ಕೆ.ಆರ್‌.ಪುರಂ, ಸೋಲದೇವನಹಳ್ಳಿ, ಎಚ್‌ಎಸ್‌ಆರ್‌ ​​ಲೇಔಟ್‌, ವೈಟ್‌ಫೀಲ್ಡ್‌, ಬಾಣಸವಾಡಿ, ಪರಪ್ಪನ ಅಗ್ರಹಾರ ಸೇರಿದಂತೆ ನಾನಾ​​ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ದಾಳಿ ವೇಳೆ ಸುಮಾರು ₹5 ಕೋಟಿ ಮೌಲ್ಯದ 3 ಕೆ.ಜಿ. 806 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್‌, 50 ಗ್ರಾಂ ಕೊಕೇ ನ್‌, 25 ಎಕ್ಸ್ಟಸಿ ಪಿಲ್ಸ್, 5 ಕ್ವಿಂಟಲ್‌ ಗಾಂಜಾ, 1 ಕಾರು, ಮೂರು ದ್ವಿಚಕ್ರ ವಾಹನ ಹಾಗೂ 9 ಮೊಬೈಲ್‌ಗ‌ಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

“ಬಂಧಿತರ ವಿರುದ್ಧ ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ” ಎಂದು ಮಾದಕ ವಸ್ತು ನಿಗ್ರಹ ದಳದ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹುಲಿ ಉಗುರು | ಕಳಸದ ಡಿಆರ್‌ಎಫ್‍ಓ ದರ್ಶನ್ ಅಮಾನತು

ವ್ಯವಹಾರಿಕ ವೀಸಾ ಪಡೆದು ನೈಜೀರಿಯಾ, ಇಥಿಯೋಪಿಯಾ ಸೇರಿ ನಾನಾ ದೇಶಗಳ 8 ಮಂದಿ ಡ್ರಗ್ಸ್‌ ಪೆಡ್ಲರ್‌ಗಳು ಬೆಂಗಳೂರಿಗೆ ಬಂದಿದ್ದರು. ಆರೋಪಿಗಳು ಕಡಿಮೆ ಸಮಯದಲ್ಲಿ ಸುಲಭವಾಗಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಗೋವಾ, ಕೇರಳ, ದೆಹಲಿ ಸೇರಿ ದೇಶದ ನಾನಾ ಕಡೆಯಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ದುಬಾರಿ ದರಕ್ಕೆ ಕಾಲೇಜು ವಿದ್ಯಾರ್ಥಿಗಳು, ಐಟಿ–ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...