ಬೆಂಗಳೂರು | ವಿವಿಧೆಡೆ ಸಿಸಿಬಿ ದಾಳಿ; ₹84 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶಕ್ಕೆ

Date:

Advertisements

ಇಂದು ಬೆಳಗ್ಗೆ ಬೆಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಸುಮಾರು ₹84 ಲಕ್ಷ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದು, 6 ಮಂದಿಯನ್ನು ಬಂಧಿಸಿದೆ. ರಾಜಗೋಪಾಲನಗರದ ದರ್ಶನ್‌, ಪ್ರಜ್ವಲ್‌ ಹಾಗೂ ಕೇರಳದ ಅಲೆಕ್ಸ್‌ ವರ್ಗಿಸ್‌, ಹಾದಿಲ್‌, ಅನಸ್ಮೊಯ್ದು, ಜೋಬಿನ್‌ ಬಂಧಿತ ಆರೋಪಿಗಳು.

ಬ್ಯಾಡರಹಳ್ಳಿಯಲ್ಲಿ 1.200 ಕೆಜಿ ಗಾಂಜಾ, 220 ಗ್ರಾಂ ಹೈಡ್ಯೋ ಗಾಂಜಾ ಹಾಗೂ 2 ಐಫೋನ್‌ ಸೇರಿ ₹13‌ ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ತಲಘಟ್ಟಪುರ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳಿ ನಡೆಸಿ ತಂಬಾಕು ಹಾಗೂ ನಿಕೋಟಿನ್‌ ಒಳಗೊಂಡ ₹61 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳು ಐಶಾರಾಮಿ ಜೀವನ ನಡೆಸಲು ಕೇರಳದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿ ವೇಳೆ ಪರವಾನಗಿ ಇಲ್ಲದೆ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಗಣೇಶ್‌, ಟೊಬ್ಯಾಕೋ ಪಟ್ಟಣ, ಕೂಲ್‌ ಲಿಪ್‌, ಎಸ್‌ಜಿಟಿ, ಸ್ವಾಗಟ ಪಾನ್‌ ಮಸಾಲಾ ಸೇರಿದಂತೆ ವಿವಿಧ ರೀತಿಯ ತಂಬಾಕು ಪೊಟ್ಟಣಗಳು ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisements

ಇದನ್ನೂ ಓದಿ: ಬೆಂಗಳೂರು | ನಟ ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ; ಇಬ್ಬರ ವಿರುದ್ಧ ಎಫ್‌ಐಆರ್‌

ಎಚ್‌ಬಿಆರ್‌ ಲೇಔಟ್‌ ಬಳಿ ದಾಳಿ ನಡೆಸಿ ನಿಷೇಧಿತ ಸಿಗರೇಟ್‌, ಹುಕ್ಕಾ, ಫಾರಿನ್‌ ಸಿಗರೇಟ್‌ನಂತರ ವಿದೇಶಿ ಇ-ಸಿಗರೇಟ್ ಮಾದರಿಗಳನ್ನು‌ ವಶಕ್ಕೆ ಪಡೆಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X