ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ ಅವರಿಗೆ ಪಿಎಚ್‌ಡಿ ಪ್ರದಾನ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಸಕ ಸಂಗಮೇಶ್ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ
ಬೆಂಗಳೂರು ವಿವಿಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಲಪತಿ ಕೆ ಅವರು ಯುವಿಸಿಇ, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ ಇನಾಯತುಲ್ಲಾ ಎಂ ಎಂಬುವವರ ಮಾರ್ಗದರ್ಶನದಲ್ಲಿ ಮಂಡಿಸಿದ “ನದಿ ಜಲಾನಯನ ಪ್ರದೇಶದ ಮೇಲ್ಮೈ ಮತ್ತು ಅಂತರ್ಜಲದಲ್ಲಿನ ಕಾಲೋಚಿತ ಹಾಗೂ ಪ್ರಾದೇಶಿಕ ವ್ಯತ್ಯಾಸಗಳ ಪರಿಮಾಣಾತ್ಮಕ, ಗುಣಾತ್ಮಕ ವಿಶ್ಲೇಷಣೆ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.