ಬೆಂಗಳೂರು | ಸಹಜೀವನ ನಡೆಸುತ್ತಿದ್ದ ಪ್ರೇಮಿಗಳು ಆತ್ಮಹತ್ಯೆ

Date:

ಪ್ರಿಯತಮನ ಜತೆಗೆ ಸಹಜೀವನ ನಡೆಸುತ್ತಿದ್ದ ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಎಂಬುವವರು ಫ್ಲ್ಯಾಟ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊತ್ತನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

ಪಶ್ಚಿಮ ಬಂಗಾಳದ ಸೌಮಿನಿ ದಾಸ್ ಹಾಗೂ ಕೇರಳದ ಅಬಿಲ್ ಮೃತಪಟ್ಟವರು. ಸೌಮಿನಿ ದಾಸ್ ಈಗಾಗಲೇ ವಿವಾಹವಾಗಿದ್ದು, ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೃತ ಅಬಿಲ್ ನಗರದಲ್ಲಿ ಹೋಂ-ನರ್ಸಿಂಗ್ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಏನಿದು ಘಟನೆ?

ಈಗಾಗಲೇ, ಸೌಮಿನಿ ವಿವಾಹವಾಗಿದ್ದರು. ಬೆಂಗಳೂರಿಗೆ ನರ್ಸಿಂಗ್ ವಿಸ್ಯಾಭ್ಯಾಸ ಮಾಡಲು ಬಂದಿದ್ದರು. ನರ್ಸಿಂಗ್ ವಿದ್ಯಾಭ್ಯಾಸ ಮುಗಿಸಿದ್ದ ಅಬಿಲ್ ನಗರದಲ್ಲಿ  ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು. ಈ ವೇಳೆ, ಅಬಿಲ್ ಮತ್ತು ಸೌಮಿನಿ ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು. ಈ ಪರಿಚಯ ಪ್ರೀತಿಗೆ ತಿರುಗಿತ್ತು. ನಂತರ ಇಬ್ಬರು ಒಂದೇ ಫ್ಲ್ಯಾಟ್‌ನಲ್ಲಿ ಸಹಜೀವನ ನಡೆಸುತ್ತಿದ್ದರು.

ಇತ್ತಿಚೆಗೆ ಸೌಮಿನಿ ಪಶ್ವಿಮ ಬಂಗಾಳಕ್ಕೆ ಹೋಗಿದ್ದರು. ಈ ವೇಳೆ, ಬೆಂಗಳೂರಿಗೆ ವಾಪಸ್ ಬರುವಾಗ ಆಕೆಯ ಪತಿಗೆ ಮದುವೆಯಾದಾಗಿನಿಂದಲೂ ನೀನು ನನಗೆ ಕಿರುಕುಳ ನೀಡುತ್ತಿದ್ದೀಯಾ. ನಿನ್ನ ಜೊತೆ ನಾನು ಇನ್ನು ಮುಂದೆ ಇರುವುದಿಲ್ಲ. ಇಲ್ಲಿಗೆ ಮತ್ತೆ ನಾನು ವಾಪಸ್ ಬರುವುದಿಲ್ಲ ಎಂದು ಹೇಳಿದ್ದಾಳೆ.

ಇದರಿಂದ ಅನುಮಾನಗೊಂಡ ಪತಿ ಆಕೆಯ ಬಗ್ಗೆ ಸಂಬಂಧಿಸಿದವರಿಗೆ ಕೇಳಿದಾಗ ಸೌಮಿನಿ ಸಹಜೀವನ ನಡೆಸುತ್ತಿರುವುದು ಗೊತ್ತಾಗಿದೆ. ಬಳಿಕ ಪತಿ ಸೌಮಿನಿಯನ್ನು ಈ ಬಗ್ಗೆ ಪತಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಟ್ಟು ಬಿಡದೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಬಳಿಕ, ಅವರಿಬ್ಬರ ಪ್ರೀತಿ ವಿಚಾರ ಎಲ್ಲರಿಗೂ ತಿಳಿದಿದೆ. ಇನ್ನು ಅವರನ್ನು ಯಾರೂ ಸುಮ್ಮನೆ ಬಿಡುವುದಿಲ್ಲ ಎಂದು ತಿಳಿದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಬೆಂಕಿ ಹಚ್ಚಿಕೊಂಡಿದ್ದ ಸಂದರ್ಭದಲ್ಲಿ ಇಬ್ಬರೂ ಕೂಗಾಡಿದ್ದರು. ಫ್ಲ್ಯಾಟ್‌ನಿಂದ ಕಿರುಚಾಟ ಕೇಳಿ ಸ್ಥಳೀಯರು ಸಹಾಯಕ್ಕೆ ತೆರಳಿದ್ದರು. ಆದರೆ, ಅಷ್ಟರಲ್ಲಾಗಲೇ, ಸೌಮಿನಿ ದಾಸ್ ಅವರು ಸಂಪೂರ್ಣ ಸುಟ್ಟು ಹೋಗಿದ್ದರು. ಅಬಿಲ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿವೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...