ಬೆಂಗಳೂರು ಗ್ರಾಮಾಂತರ | ಆನೇಕಲ್​ ಬಳಿ ಮನೆಯ ಸಿಲಿಂಡರ್​ ಸ್ಫೋಟ

Date:

ಮನೆಯಲ್ಲಿನ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್​ ಬಳಿಯ ಬನ್ನೇರುಘಟ್ಟದ ಸುದರ್ಶನ್​ ಲೇಔಟ್​ನಲ್ಲಿ ನಡೆದಿದೆ.

- Advertisement -

ರಾಜೇಂದ್ರ ಎಂಬುವವರಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ರಾಜೇಂದ್ರ ಅವರು ಎಂದಿನಂತೆ ನ.3ರಂದು ಬೆಳಗ್ಗೆ 5 ಗಂಟೆಗೆ ಸಿಲಿಂಡರ್ ಆನ್ ಮಾಡಲು ಅಡುಗೆ ಮನೆಗೆ ಹೋಗಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದಿಂದಾಗಿ ರಾಜೇಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಸ್ಪೋಟ ಸಂಭವಿಸಿದಾಗ ಮನೆಯಲ್ಲಿ ರಾಜೇಂದ್ರ ಹಾಗೂ ಅವರ ಮಗಳು ಇದ್ದರು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಷ್ಠಿತ ಐಸ್ ಕ್ರೀಂ ಕಂಪನಿ ಮಾಲೀಕರ ಸೊಸೆ ಆತ್ಮಹತ್ಯೆ ಪ್ರಕರಣ; ವಾರದ ಬಳಿಕ ಹೊರಬಿದ್ದ ಸತ್ಯ

ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮೂರ್ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಅಕ್ಕಪಕ್ಕ ಮನೆಯ ಬಾಗಿಲು, ಡೋರ್ ಹಾಗೂ ಮನೆಯಲ್ಲಿದ್ದ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರು ಹಾಗೂ ಬೈಕ್​​ಗಳಿಗೂ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...