ಬೆಂಗಳೂರು | ಮಲೆನಾಡಿನ ಜನವಿರೋಧಿ ಅರಣ್ಯ ಕಾಯ್ದೆ ಕೈಬಿಡುವಂತೆ ನಿಯೋಗ; ಸಮಸ್ಯೆ ಪರಿಹಾರಕ್ಕೆ ಸಚಿವ ಕೃಷ್ಣಬೈರೇಗೌಡ ಭರವಸೆ

Date:

Advertisements

ಮಲೆನಾಡಿನ ಜನವಿರೋಧಿ ಅರಣ್ಯ ಕಾಯ್ದೆಯನ್ನು ಕೈಬಿಡುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ, ಮಲೆನಾಡಿನ ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿಯ ನಿಯೋಗ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ ಸಲ್ಲಿಸಿತು.

ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ನೀಡಿದ್ದು, “ಮಲೆನಾಡಿನಲ್ಲಿ ಬದುಕುತ್ತಿರುವ ಜನರ ಪರಿಸ್ಥಿತಿ ಹದಗೆಟ್ಟಿದೆ. ಪರಿಸರ ಸಂರಕ್ಷಣೆ ಹೆಸರಿನಲ್ಲಿ ಸಾವಿರಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ಕಸ್ತೂರಿ ರಂಗನ್, ಮಾಧವ ಗಾಡ್ಗೀಳ್ ವರದಿ ಮುಂದಿಟ್ಟುಕೊಂಡು ಕಂದಾಯ ಭೂಮಿಯನ್ನು ಅರಣ್ಯ ಭೂಮಿಯೆಂದು ಘೋಷಿಸಿರುವುದು ಸರಿಯಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ಡೀಮ್ಡ್ ಫಾರೆಸ್ಟ್, ರಿಸರ್ವ್ ಫಾರೆಸ್ಟ್ ಮಾಡಿರುವುದನ್ನು ಸೂಕ್ಷ್ಮವಾಗಿ ಮತ್ತೆ ಪರಿಶೀಲನೆ ಮಾಡಬೇಕು. ಇಲ್ಲಿ ವಾಸ್ತವವಾಗಿ ಅನುಭವಿಸುತ್ತಿರುವುದನ್ನು ಸರ್ಕಾರ ಗಮನಿಸಬೇಕು. ಸೂಕ್ತವಾದ ರೀತಿಯಲ್ಲಿ ಅರಣ್ಯ ಕಾಯ್ದೆ ತಿದ್ದುಪಡಿ ಮಾಡಬೇಕು.‌ ರಾಜ್ಯದಲ್ಲಿ ಈ ಸಮಸ್ಯೆಗೆ ಒಂದು ಸಮಿತಿ ರಚನೆ ಮಾಡಿ ಮಲೆನಾಡಿನ ಜನರ ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

Advertisements

ಮನವಿ ಸ್ವೀಕರಿಸಿದ ಸಚಿವರು ಮಾತನಾಡಿ, “ನಾವು ಮಲೆನಾಡಿನ ಸಮಸ್ಯೆಯನ್ನು ಆಲಿಸಿದ್ದೇವೆ. ಸರ್ಕಾರ ಜಾರಿ ಮಾಡಿರುವ ವರದಿಯನ್ನು ನಮ್ಮಲ್ಲಿ ತೆಗೆದು ಹಾಕಲು ಸಾಧ್ಯವಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಮಾತ್ರ ಸಾಧ್ಯ. ನಿಮ್ಮ ಕ್ಷೇತ್ರದ ಲೋಕಸಭಾ ಸದಸ್ಯರು ಗಮನವಹಿಸಿ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ, ವೈಚಾರಿಕ ಮನೋಭಾವ ಬೆಳಿಸಿಕೊಳ್ಳಬೇಕು: ಸಚಿವ ಹೆಚ್‌ ಸಿ ಮಹದೇವಪ್ಪ

“ನೀವು ಕೇಳಿದಂತೆ ರಾಜ್ಯದಲ್ಲಿ ಕೂಡಲೇ ಒಂದು ಸಮಿತಿ ರಚನೆ ಮಾಡಲು ಸಾಧ್ಯವಿಲ್ಲ. ಮೊದಲು ಕೇಂದ್ರದಿಂದ ಅರಣ್ಯ ಕಾಯ್ದೆ ವರದಿಗಳನ್ನು ಅಲ್ಲಿ ಸರಿಪಡಿಸಿದ ನಂತರ ನಾವು ಸಮಿತಿ ರಚನೆ ಮಾಡಲು ಸಾಧ್ಯವಾಗುತ್ತದೆ. ಈ ಕುರಿತು ನಾವು ಸಾಧ್ಯವಾದಷ್ಟು ಸರ್ಕಾರದ ಗಮನಕ್ಕೆ ತರುತ್ತೇವೆ. ಎಲ್ಲೆಲ್ಲಿ ಈ ಸಮಸ್ಯೆಯಿದೆ ಎಂಬುದನ್ನು ಪರಿಶೀಲಿಸಿ ಬಗೆಹರಿಸಲು ಕ್ರಮವಹಿಸುತ್ತೇವೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X