ಬೆಂಗಳೂರು | ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಭದ್ರತೆಗೆ ಸೂಕ್ತ ಕ್ರಮಕ್ಕೆ ಆಗ್ರಹ

Date:

ಹೊಸ ‌ಸರ್ಕಾರವು ಶಿಕ್ಷಣ ಹಕ್ಕು ಕಾಯಿದೆ ಮತ್ತು ಸಂವಿಧಾನದ ಆಶಯಗಳ ಅನ್ವಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಎಲ್ಲ ಬಗೆಯ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಆಗ್ರಹಿಸಿತು.

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ವತಿಯಿಂದ ‘ಜಾತಿ ಧರ್ಮ ದ್ವೇಷ ಸಾಕು -ಶಿಕ್ಷಣದ ಮೂಲಭೂತ ಹಕ್ಕು ಬೇಕುʼ ಎಂಬ ಘೋಷ ವಾಕ್ಯದೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಕ್ಷಣವನ್ನು ಒಂದು ಪ್ರಧಾನ ವಿಷಯವನ್ನಾಗಿಸಲು ರಾಜ್ಯಾದಂತ ಸಕ್ರಿಯವಾಗಿ ನಡೆದ ಕಾರ್ಯದ ರಾಜ್ಯ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗಾಗಿ ಸರ್ಕಾರದ ಜೊತೆ ರಚನಾತ್ಮಕವಾಗಿ ಅಗತ್ಯವಿದ್ದಲ್ಲಿ ಹೋರಾಟದ ಮೂಲಕ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿ, ರಾಜ್ಯ ಸಮಿತಿಯು ಮುಂದಿನ ಮೂರು ವರ್ಷಕ್ಕೆ ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ ವಿ.ಪಿ ನೇತೃತ್ವದ ಒಂದು ತಂಡವನ್ನು ಸರ್ವಾನುಮತದಿಂದ ಆಯ್ಕೆ ಮಾಡಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯ ಸಮಿತಿ ಸಭೆಯ ಪ್ರಮುಖ ನಿರ್ಣಯಗಳು

• ಈಗಾಗಲೇ ಮುದ್ರವಾಗಿ ಬಿಇಒ ಕಚೇರಿ/ಶಾಲೆಗಳಿಗೆ ತಲುಪಿರುವ ಕಲುಷಿತ ಪುಸ್ತಕಗಳನ್ನು ಯಥಾವತ್ತಾಗಿ ಮಕ್ಕಳಿಗೆ ವಿತರಿಸದಿರಲು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಬೇಕು. ಈ ಪಠ್ಯಪುಸ್ತಕಗಳಲ್ಲಿ ಬದಲಾಗಿದ್ದ ಪ್ರಮುಖ ಪಾಠಗಳನ್ನು ಮತ್ತು ಕಲಿಕಾಂಶಗಳನ್ನು ಈ ಪುಸ್ತಕಗಳಿಂದ ತೆಗೆದು ಹಾಕಿ ವಿತರಿಸಲು ಅಯಾ ವ್ಯಾಪ್ತಿಯ ಸಿಆರ್‌ಪಿ ಮತ್ತು ಶಾಲೆಯ ಶಿಕ್ಷಕರನ್ನು ಹೊಣೆ ಮಾಡಬೇಕು.

• ಕಲುಷಿತ ವಿಷಯಗಳನ್ನು ಕಲಿಕೆ ಮತ್ತು ಮೌಲ್ಯಮಾಪನದಿಂದ ಕೈಬಿಡಲು ಸ್ಪಷ್ಟ ಸೂಚನೆ ನೀಡಬೇಕು . ಜೊತೆಗೆ, ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಕಡ್ಡಾಯವಾಗಿ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ ಅಳವಡಿಸಿಕೊಳ್ಳುವ ಮೂಲಕ ಅತ್ಯುತ್ತಮವಾಗಿ ಕಲಿಸುವಂತೆ ಸ್ಪಷ್ಟ ಮಾರ್ಗಸೂಚಿ ಹೊರಡಿಸುವುದು.

•ಎಲ್ಲ ಪುಸ್ತಕಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಇಂದಿನ ಬದಲಾವಣೆಗೆ ತಕ್ಕಂತೆ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಕೂಡಲೇ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು.

• ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ನೇಮಕಾತಿ ಮಕ್ಕಳ ಕಲಿಕೆಯನ್ನು ಪೂರ್ಣವಾಗಿ ಹಳಿ ತಪ್ಪಿಸಿದೆ. 2021-22 ನೇ ಸಾಲಿನಲ್ಲಿ ರಾಜ್ಯದಲ್ಲಿ ಸರಿ ಸುಮಾರು 1,41,358 ಖಾಲಿ ಹುದ್ದೆಗಳಿವೆ. ಈ ಪೈಕಿ 13,352 ಖಾಯಂ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಬಹುತೇಕ ಮುಗಿದಿದ್ದು, ಮುಂದಿನ ಒಂದು ವಾರದ ಒಳಗಾಗಿ ಈ ಶಿಕ್ಷಕರು ಶಾಲೆಗಳಲ್ಲಿರುವಂತೆ ತುರ್ತು ಕ್ರಮ ವಹಿಸಬೇಕು.

• ಸರ್ಕಾರಿ ಶಾಲೆಯಲ್ಲಿ ಮಕ್ಕಳಿದ್ದರೂ ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಖಾಯಂ ಶಿಕ್ಷಕರ ನೇಮಕವಾಗಬೇಕು. ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಅತಿಥಿ ಶಿಕ್ಷಕರನ್ನು ಜೂನ್ 15ರ ಒಳಗಾಗಿ ನೇಮಿಸಿಕೊಳ್ಳಲು ಯುದ್ಧೋಪಾದಿಯಲ್ಲಿ ಕ್ರಮ ವಹಿಸುವುದು. ಈ ಪ್ರಕ್ರಿಯೆಯನ್ನು ಶಾಲಾ ಹಂತದಲ್ಲಿ ಎಸ್‌ಡಿಎಂಸಿ, ಶಿಕ್ಷಕರ ವ್ಯಾಪ್ತಿಗೆ ಹಾಗೂ ವಿವೇಚನೆಗೆ ಬಿಡಬೇಕು. ಇದನ್ನು ಸಂಬಂಧಿಸಿದ ಬಿಆರ್‌ಸಿ ಮೇಲುಸ್ತುವಾರಿ ಮಾಡಬೇಕು.

• ಶಾಲೆ ಪ್ರಾರಂಭಕ್ಕೆ ಮುನ್ನ ಎಲ್ಲ ಮಕ್ಕಳಿಗೆ ಉತ್ತೇಜಕಗಳಾದ ಸಮವಸ್ತ್ರ, ಶೂ ಮತ್ತು ಸಾಕ್ಸ್‌ಗಳನ್ನು ಸಕಾಲಕ್ಕೆ ಒದಗಿಸುವುದು. ಶಾಲಾ ಹಂತದಲ್ಲಿ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 12ನೇ ತರಗತಿಯವರೆಗೆ ಕಲಿಯುತ್ತಿರುವ ಎಲ್ಲ ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುವುದು. ಇದು ಶಾಲಾ ಲಾಗಿನ್‌ನಲ್ಲಿಯೇ ದೊರೆಯುವಂತೆ ಮಾಡುವುದು.

• ಕಳೆದ ಮೂರ್ನಾಲ್ಕು ವರ್ಷಗಳಿಂದ ಶಾಲಾ ಅನುದಾನಗಳು ಪೂರ್ಣ ಪ್ರಮಾಣದಲ್ಲಿ ಬಾರದಿರುವುದರಿಂದ ಸೀಮೇಸುಣ್ಣ-ಬಿಳಿ ಹಾಳೆಗಳ ಖರೀದಿಯೂ ಕಷ್ಟವಾಗಿದ್ದು, ಕೂಡಲೇ ಶಾಲಾ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ವಹಿಸಬೇಕು.

• ಸರ್ಕಾರಿ ಶಾಲೆಗಳಲ್ಲಿ ಬಳಸುವ ವಿದ್ಯುಚ್ಛಕ್ತಿ ಹಾಗೂ ನೀರಿನ ಬಳಕೆಯ ಬಿಲ್ ಹಣವನ್ನು ಕೂಡಲೇ ಜಾರಿಗೆ ಬರುವಂತೆ ಮನ್ನಾ ಮಾಡುವುದು. ಪ್ರೌಢ ಶಿಕ್ಷಣ ಮುಂದುವರಿಸಲು ಅನುಕೂಲವಾಗುವಂತೆ ಹೆಣ್ಣು ಹಾಗೂ ಗಂಡು ಮಕ್ಕಳಿಗೆ ಸಿಗುತ್ತಿದ್ದ ಬೈಸಿಕಲ್ ವಿತರಣೆ ಕಳೆದ ನಾಲ್ಕು ವರ್ಷಗಳಿಂದ (2019-2020) ಸ್ಥಗಿತವಾಗಿದ್ದು ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದಾರೆ. ಆದ್ದರಿಂದ, ಕೂಡಲೇ ಮಕ್ಕಳಿಗೆ ಬೈಸಿಕಲ್ ವಿತರಿಸುವ ಪ್ರಕ್ರಿಯೆ ಪ್ರಾರಂಭಿಸಬೇಕು.

• ಹಲವು ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಜೂನ್ 1ರ ಒಳಗೆ ಎಲ್ಲ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಪುನರಾರಂಭಗೊಳ್ಳುವಂತೆ ಜರೂರು ಕ್ರಮ ವಹಿಸುವುದು. ಶುದ್ಧ ಕುಡಿಯುವ ನೀರು, ಮಕ್ಕಳ ಶೌಚಾಲಯ, ತರಗತಿ ಕೋಣೆ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಪ್ರಥಮ ಆದ್ಯತೆಯಾಗಬೇಕು

• ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಭಾಗವಾಗಿ ಮಧ್ಯಾಹ್ನದ ಬಿಸಿಯೂಟದ ವೆಚ್ಚಕ್ಕೆ ಈಗಿರುವ ಪ್ರತಿ ಮಗುವಿನ ಯುನಿಟ್ ವೆಚ್ಚವನ್ನು ಹೆಚ್ಚಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಅಥವಾ ಅದರ ಮಾದರಿಯಲ್ಲಿ ಮಧ್ಯಾಹ್ನ ಉಚಿತ ಊಟ ಒದಗಿಸಬೇಕು.

• ಸಂವಿಧಾನದಲ್ಲಿನ ಮೂಲಭೂತ ಹಕ್ಕಾಗಿರುವ 21ಎ ಕೊಡಮಾಡುವ ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು, ನಿಗದಿತ ಸಮಯದಲ್ಲಿ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಹೊಸ ಸರ್ಕಾರ ಕಾಲಮಿತಿ ಯೋಜನೆ ರೂಪಿಸಬೇಕು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಶಾಲೆಗಳ ಪುನರಾರಂಭ; ಲೇಖನಿ ಸಾಮಗ್ರಿ ಕೊಂಡುಕೊಳ್ಳಲು ನಿರಾಸಕ್ತಿ

• ಯಾವುದೇ ನೆಪಹೇಳಿ ಸರ್ಕಾರಿ ಶಾಲೆಗಳನ್ನು ಸಾಮೂಹಿಕವಾಗಿ ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಪೂರ್ಣವಾಗಿ ನಿಲ್ಲಿಸಬೇಕು. ಬಾಲ್ಯಪೂರ್ವ ಆರೈಕೆ ಮತ್ತು ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗೂ ಶಿಕ್ಷಣ ಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.

• ಮಕ್ಕಳಿಗೆ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ಉಪಹಾರ ಯೋಜನೆಯನ್ನೂ ಜಾರಿಗೊಳಿಸುವುದು ಹಾಗೂ ರಾಜ್ಯದಲ್ಲಿ ಅಪೌಷ್ಠಿಕತೆ ತೊಡೆದು ಹಾಕಲು ಅಂಗನವಾಡಿಯಿಂದ 10ನೇ ತರಗತಿಯ ಎಲ್ಲ ಮಕ್ಕಳಿಗೆ ಪ್ರತಿದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕು.

• ಶಾಲಾ ಹಂತದಲ್ಲಿ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳನ್ನು ಪ್ರಜಾಸತ್ತಾತ್ಮಕವಾಗಿ ರಚಿಸಿ ಬಲವರ್ಧನೆಗೊಳಿಸಲು ಪರಿಣಾಮಕಾರಿ ತರಬೇತಿ ಒದಗಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯ ಆಯವ್ಯಯದಲ್ಲಿ ಶಿಕ್ಷಣಕ್ಕೆ ಶೇ.20ರಷ್ಟು ಮೀಸಲಿಡಬೇಕು ಎಂದು ಮಹಾ ಪೋಷಕರು ಹಾಗೂ ಅಭಿವೃದ್ಧಿ ಶಿಕ್ಷಣ ತಜ್ಞರು ನಿರಂಜನಾರಾಧ್ಯ ವಿ ಪಿ ಬೇಡಿಕೆ ಇಟ್ಟಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪ್ರೇಯಸಿ ಮದುವೆ ದಿನವೇ ಯುವಕ ನಿಗೂಢ ಸಾವು; ಕೊಲೆ ಶಂಕೆ

ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್‌...

ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು...

ಗದಗದ ಒಂದೇ ಕುಟುಂಬದ ನಾಲ್ವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು: ಮಗ ವಿನಾಯಕನಿಂದಲೇ ಸುಪಾರಿ!

ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೂರು ದಿನಗಳ ಹಿಂದೆ...

ಕಲಬುರಗಿ | ಸರ್ಕಾರಗಳಿಂದ ತೊಗರಿಬೆಳೆಗಾರರಿಗೆ ದ್ರೋಹ: ಶರಣಬಸಪ್ಪ ಮಮಶೆಟ್ಟಿ

ಕಲ್ಯಾಣ ಕರ್ನಾಟಕ ನಾಡಿನ ತೊಗರಿಕಣಜದ ಅಭಿವೃದ್ಧಿ ಕುಂಟಿತಾ ಕಂಡಿದೆ ಇದೊಂದು ತೊಗರಿ...