ಬೆಂಗಳೂರು | ಬಿ ರಾಚಯ್ಯ ದತ್ತಿನಿಧಿ ಪ್ರಶಸ್ತಿಗೆ ದಿನೇಶ್ ಅಮಿನ್ ಮಟ್ಟು ಆಯ್ಕೆ

Date:

ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ ಕೊಡ ಮಾಡುವ ‘ಬಿ ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆಯ ಮೂಲಕ ಮಾಹಿತಿ ನೀಡಿರುವ ಸಂಘ, “2022-23ನೇ ಸಾಲಿನ ಬಿ ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗೆ ಸುದ್ದಿ ಮಾಧ್ಯಮ‌ಕ್ಷೇತ್ರದಲ್ಲಿ ದಲಿತರು – ದಮನಿತರ ಪರವಾಗಿ ದುಡಿಯುತ್ತಿರುವ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ” ಎಂದು ಹೇಳಿದೆ.

“ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತ, ದಮನಿತರ ಪರವಾಗಿ ವೃತ್ತಿಪರತೆಯಿಂದ ದುಡಿದಂತಹ ಸಾರ್ವತ್ರಿಕವಾಗಿ ಹಿರಿಯ ಪತ್ರಕರ್ತರೊಬ್ಬರನ್ನು ಗುರುತಿಸಿ ಪ್ರತಿವರ್ಷ ಹಿರಿಯ ರಾಜಕಾರಣಿ ಬಿ ರಾಚಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ” ಎಂದು ಸಂಘವು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರಶಸ್ತಿಯು 10.000 ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನು ಹೊಂದಿರಲಿದೆ” ಎಂದು ಸಂಘ ಹೇಳಿದೆ.

ಜೊತೆಗೆ, ಪ್ರತಿವರ್ಷವೂ ಎಸ್‌ಸಿ/ಎಸ್‌ಟಿ ಸಮಯದಾಯ ಮೂವರು ಹಿರಿಯ ಸಂಪಾದಕರಿಗೆ ನೀಡಲಾಗುವ ‘ವಾರ್ಷಿಕ ಪ್ರಶಸ್ತಿ’ಗೆ ಕೋಲಾರದ ಸಿ ಮುನಿಯಪ್ಪ, ಚಿತ್ರದುರ್ಗದ ಮೈಲಾರಪ್ಪ ಮತ್ತು ಬೀದರ್‌ನ ಮಾಳಪ್ಪ ಅಡಸಾರೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ 5000 ರೂ. ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ” ಎಂದು ತಿಳಿಸಿದೆ.

ಜುಲೈ ಕೊನೆ ವಾರದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ. ಅಂದು ಎಲ್ಲರಿಗೂ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನೂರರ ಗಡಿ ದಾಟಿದ ಟೊಮೆಟೊ ದರ; ದ್ವಿಶತಕದತ್ತ ಮುಖ ಮಾಡಿದ ಬೀನ್ಸ್‌

ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ...

ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ನಿರ್ಧಾರ : ಅಂಗನವಾಡಿ ನೌಕರರ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭಿಸುವ...

ತುಮಕೂರು | ಕಲುಷಿತ ನೀರಿಗೆ ಆರು ಮಂದಿ ಬಲಿ; 50 ಮಂದಿ ಅಸ್ವಸ್ಥ

ಕರ್ನಾಟಕದ ಗಡಿಭಾಗದಲ್ಲಿರೊ ಪುಟ್ಟ ಗ್ರಾಮ ತುಮಕೂರು ಜಿಲ್ಲೆಯ ಚಿನ್ನೇನಹಳ್ಳಿ. ಗ್ರಾಮದಲ್ಲಿ ಸುಮಾರು...

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...