ಬೆಂಗಳೂರು | ಡಾ. ಸುನಿಲ್ ಕುಮಾರ್ ಹೆಬ್ಬಿ ಮೇಲೆ ಮಾರಣಾಂತಿಕ ಹಲ್ಲೆ; ಪೊಲೀಸ್ ರಕ್ಷಣೆಗೆ ಆಗ್ರಹ

Date:

ಯಲಹಂಕದ ಕೇಂದ್ರೀಯ ವಿಹಾರ ಬಹು ಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ವಾಸ ಮಾಡುತ್ತಿರುವ ಡಾ. ಸುನಿಲ್ ಕುಮಾರ್ ಹೆಬ್ಬಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆಯಿಂದ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದರು.

- Advertisement -

ಘಟನೆಗೆ ಸಂಬಂಧಿಸಿದಂತೆ ನೈಜ ಹೋರಾಟಗಾರರ ವೇದಿಕೆ ಯಲಹಂಕ ಪೊಲೀಸ್ ಠಾಣೆಗೆ ದೂರು ನೀಡಿದ್ದು, “ಡಾ. ಸುನಿಲ್ ಕುಮಾರ್ ಹೆಬ್ಬಿ ಅವರು ಬಡವರ, ದೀನ ದುರ್ಬಲರ ವೈದ್ಯಕೀಯ ಸೇವೆಯನ್ನು ಉಚಿತವಾಗಿ ಮಾಡುತ್ತಾ ಬಂದಿದ್ದಾರೆ. ಬಹಳ ಮುಖ್ಯವಾಗಿ ಕೋವಿಡ್-19 ಸಮಯದಲ್ಲಿ ಇಡೀ ದೇಶವೇ ತಲ್ಲಣವಾದ ಸಂದರ್ಭದಲ್ಲಿ ಮತ್ತು ಲಾಕ್‌ಡೌನ್ ಆದ ಸಂದರ್ಭದಲ್ಲಿ ಮೊಬೈಲ್ ಕ್ಲಿನಿಕ್ ಮುಖಾಂತರ ಸ್ಲಂಗಳಿಗೆ ತೆರಳಿ ಬಡವರಿಗೆ ಚಿಕಿತ್ಸೆ ನೀಡಿದ್ದರು. ಇವರು ಮೊಬೈಲ್ ಡಾಕ್ಟರ್ ಎಂದೇ ಖ್ಯಾತಿ ಪಡೆದಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

“ಡಾ. ಸುನಿಲ್ ಕುಮಾರ್ ಹೆಬ್ಬಿ ಅವರು ವಾಸವಿರುವ ಕೇಂದ್ರೀಯ ವಿಹಾರದ ಅಪಾರ್ಟ್‌ಮೆಂಟ್‌ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸೊಸೈಟಿ ಆಫ್ ರಿಜಿಸ್ಟರ್ ಅವರಿಗೆ ದೂರು ನೀಡಿದ್ದರು. ಹಾಗೆಯೇ ಅಲ್ಲಿನ ಅವ್ಯವಹಾರವನ್ನು ಮಾಹಿತಿ ಹಕ್ಕು ಕಾಯ್ದೆ ಮೂಲಕ ಬಯಲಿಗೆಳೆದು, ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್ ಮಾಡಿಸಿದ್ದರು ಹಾಗೂ ನೋಟಿಸ್ ಕೂಡ ಕೊಡಿಸಿದ್ದರೆಂದು ಹೇಳಲಾಗುತ್ತಿದೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಈ ಕಾರಣಕ್ಕಾಗಿ ಅವರ ಮೇಲೆ ಕಾರ್ ಪಾರ್ಕಿಂಗ್ ವಿಷಯವನ್ನು ತೆಗೆದು ಸುನಿಲ್ ಯಾದವ್ ಮತ್ತು ಅವರ ಗುಂಪು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನಲ್ಲಿರುವ ಸಾಮಾಜಿಕ ಹೋರಾಟಗಾರರು ಮಲ್ಲೇಶ್ವರಂ ನಗರದ ಕೆ ಸಿ ಜನರಲ್ ಆಸ್ಪತ್ರೆಗೆ ಧಾವಿಸಿ ಅವರ ಆರೋಗ್ಯವನ್ನು ವಿಚಾರಿಸುವಂತೆ ನಮ್ಮ ಗಮನಕ್ಕೆ ತಂದಿದ್ದರು” ಎಂದಿದ್ದಾರೆ.

“ಬಡವರಿಗೆ ಉಚಿತವಾಗಿ ವೈದ್ಯಕೀಯ ಸೇವೆ ನೀಡುತ್ತಿರುವ ಸುನಿಲ್ ಕುಮಾರ್ ಹೆಬ್ಬಿ ಅವರು ಮಾಹಿತಿ ಹಕ್ಕು ಕಾಯ್ದೆಯ ಅಡಿ ಕೆಲವು ಭ್ರಷ್ಟಾಚಾರವನ್ನು ಕೂಡ ಬಯಲು ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಾಕ್ಟರ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ದೂರಿನನ್ವಯ ಯಲಹಂಕ ಪೊಲೀಸ್ ಠಾಣೆ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಆದರೆ ಬಹಳ ಮುಖ್ಯವಾಗಿ ಕೊಲೆ ಪ್ರಯತ್ನವಾಗಿದ್ದರೂ ಸೆಕ್ಷನ್ 307ರ ಅಡಿ ಎಫ್‌ಐಆರ್ ದಾಖಲು ಮಾಡದೆ ಕರ್ತವ್ಯ ಲೋಪ ಮಾಡಿದ್ದಾರೆ. ಇದೊಂದು ಕೊಲೆ ಮಾಡುವ ಪ್ರಯತ್ನವೆಂದು ಸ್ಪಷ್ಟವಾಗಿ ಗೋಚರಿಸಿದರೂ ಕೂಡಾ ಪೊಲೀಸರು ಸೆಕ್ಷನ್ 307 ಹಾಕದಿರುವುದು ಅನುಮಾನಕ್ಕೆ ಎಡೆಮಾಡಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ: ಡಾ. ಆರತಿ ಕೃಷ್ಣ

“ಪೋಲಿಸ್ ಆಯುಕ್ತರಾದ ತಾವು ಸದರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಹಾಗೂ ಡಾಕ್ಟರ್ ಸುನಿಲ್ ಕುಮಾರ ಹೆಬ್ಬಿ ಅವರಿಗೆ ಕೂಡಲೇ ಪೊಲೀಸ್ ರಕ್ಷಣೆ ಒದಗಿಸಬೇಕು” ಎಂದು ನೈಜ ಹೋರಾಟಗಾರರ ವೇದಿಕೆಯು ಆಗ್ರಹಿಸಿದೆ.

ನೈಜ ಹೋರಾಟಗಾರರ ವೇದಿಕೆಯ ಪರವಾಗಿ ಎಚ್ ಎಂ ವೆಂಕಟೇಶ್, ಟಿ ನರಸಿಂಹಮೂರ್ತಿ, ಕುಣಿಗಲ್ ನರಸಿಂಹಮೂರ್ತಿ, ಎಲ್ ಎಸ್ ಮಲ್ಲಿಕಾರ್ಜುನ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...