ಬೆಂಗಳೂರು | ಐಟಿ ದಾಳಿ ವೇಳೆ ಮಂಚದಡಿ ಕಂತೆ ಕಂತೆ ನೋಟು ಪತ್ತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ್ದು, ಕಳೆದ ಹಲವು ದಿನಗಳಿಂದ ನಗರದಲ್ಲಿ ದಾಳಿ ನಡೆಸುತ್ತಿದ್ದಾರೆ. ಗುರುವಾರ ಸಾಯಂಕಾಲ ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿದ್ದಾರೆ.

ಏಕಕಾಲದಲ್ಲಿ ಆರ್‌ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಆತ್ಮಾನಂದ ಕಾಲೋನಿಯ ಫ್ಲಾಟ್‌ವೊಂದರ ಕೊಠಡಿಯ ಮಂಚದಡಿ ಕಂತೆ ಕಂತೆ ನೋಟುಗಳನ್ನು ಬಚ್ಚಿಡಲಾಗಿತ್ತು. ಕಾರಿನಲ್ಲಿ ಹಣ ಸಾಗಾಟ ಮಾಡುವ ಸುಳಿವು ಪಡೆದ ಐಟಿ ಅಧಿಕಾರಿಗಳು ಗುರುವಾರ ಸಾಯಂಕಾಲ 6 ಗಂಟೆ ಸುಮಾರಿಗೆ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ದಾಳಿ ನಡೆಸಿದ್ದಾರೆ.

ಈ ವೇಳೆ, ಆತ್ಮಾನಂದ ಕಾಲೋನಿಯ ಫ್ಲಾಟ್​ನಲ್ಲಿ ಬರೊಬ್ಬರಿ 23 ಬಾಕ್ಸ್​ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಂಚದ ಕೆಳಗೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಆದರೆ, ಪತ್ತೆಯಾದ ನೋಟಿನ ರಾಶಿಯ ಬಾಕ್ಸ್‌ಗಳು ಯಾರಿಗೆ ಸೇರಿದ್ದು ಎಂದು ತಿಳಿದುಬಂದಿಲ್ಲ. ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಟಾಕಿ ದುರಂತ | ಗಾಯಾಳು ಚಿಕಿತ್ಸೆಗೆ ಹಣ ಪಡೆದ ಸೇಂಟ್‌ ಜಾನ್ಸ್‌ ಆಸ್ಪತ್ರೆ ವಿರುದ್ಧ ಎಫ್‌ಐಆರ್‌

ಪತ್ತೆಯಾದ ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ ಅಧಿಕಾರಿಗಳು, ಬಳಿಕ ಗಣೇಶ ಬ್ಲಾಕ್​ನಲ್ಲಿರುವ ವಾರ್ಡ್ ನಂ 95ರ ಮಾಜಿ ಕಾರ್ಪೊರೇಟರ್ ಅಶ್ವತಮ್ಮ ಹಾಗೂ ಆರ್.ಅಂಬಿಕಾಪತಿ ದಂಪತಿಗಳ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೈಂದೂರು | ಸಮಾಜದ ಎಲ್ಲ ವರ್ಗದವರ ಹಿತ ಕಾಯಲು ಬದ್ಧ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲ...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...