ಬೆಂಗಳೂರು | ಗುತ್ತಿಗೆದಾರನನ್ನು ಕಿಡ್ನ್ಯಾಪ್‌ ಮಾಡಿ ₹3 ಕೋಟಿ ಚೆಕ್‌ ಪಡೆದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

Date:

‘ನಿನ್ನಿಂದ ಕಾಮಗಾರಿ ಕೈ ತಪ್ಪಿ, ನನಗೆ ಅಪಾರ ನಷ್ಟವಾಗಿದೆ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಕಾರ್ಪೋರೇಟರ್‌ ಜಿ.ಕೆ.ವೆಂಕಟೇಶ್ ಅವರು ಗುತ್ತಿಗೆದಾರರೊಬ್ಬರನ್ನು ಕಿಡ್ನ್ಯಾಪ್ ಮಾಡಿ ₹3 ಕೋಟಿ ಬೇಡಿಕೆ ಇಟ್ಟ ಘಟನೆ ಬೆಳಕಿಗೆ ಬಂದಿದೆ.

- Advertisement -

ಸದ್ಯ ಬಿಬಿಎಂಪಿ ಮಾಜಿ ಕಾರ್ಪೋರೇಟರ್‌ ಜಿ.ಕೆ.ವೆಂಕಟೇಶ್ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಏನಿದು ಪ್ರಕರಣ?

ಯಶವಂತಪುರದ ವಾರ್ಡ್‌ ಕಾಮಗಾರಿಯನ್ನು ಗುತ್ತಿಗೆದಾರ ಚಂದ್ರು ಎಂಬುವವರು ತೆಗೆದುಕೊಂಡಿದ್ದರು. ಇವರಿಗೆ ಗುತ್ತಿಗೆ ಸಿಕ್ಕ ಹಿನ್ನೆಲೆ, ಮಾಜಿ ಕಾರ್ಪೋರೇಟರ್‌ ಕೋಪಗೊಂಡಿದ್ದರು.

ನಿನ್ನಿಂದ ನನಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಕಾಮಗಾರಿ ಕೂಡ ಕೈ ತಪ್ಪಿದೆ. ಕೂಡಲೇ ನನ್ನ ನಷ್ಟವನ್ನು ತುಂಬಿಕೊಡಬೇಕು ಎಂದು ಗುತ್ತಿಗೆದಾರ ಚಂದ್ರು ಅವರ ಮೇಲೆ ಒತ್ತಡ ಹಾಕಿದ್ದರು.

ಈ ಹಿನ್ನೆಲೆ, ಕಳೆದ ಎರಡು ದಿನಗಳ ಹಿಂದೆ ಮಾಜಿ ಕಾರ್ಪೋರೇಟರ್ ವೆಂಕಟೇಶ್ ಅವರು ಗುತ್ತಿಗೆದಾರ ಚಂದ್ರು ಅವರನ್ನು ಕಿಡ್ನ್ಯಾಪ್‌ ಮಾಡಿದ್ದಾರೆ. ಬಳಿಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ, ₹3 ಕೋಟಿ ಚೆಕ್ ಪಡೆದು ಗುತ್ತಿಗೆದಾರನ ಮೇಲೆ ಹಲ್ಲೆ ನಡೆಸಿ ನಂತರ ಬಿಟ್ಟು ಕಳಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಗುತ್ತಿಗೆದಾರ ಚಂದ್ರು ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆ, ಜಿ.ಕೆ.ವೆಂಕಟೇಶ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...