ಬೆಂಗಳೂರು | ಕನ್ನಡೇತರರಿಗಾಗಿ ಉಚಿತ ಕನ್ನಡ ಕಲಿಕಾ ಕೇಂದ್ರ ಆರಂಭ

Date:

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಹೊಸ ಉಚಿತ ಕನ್ನಡ ಕಲಿಕಾ ಕೇಂದ್ರ ಪ್ರಾರಂಭಿಸಿಲಾಗಿದೆ.

- Advertisement -

ಕೇಂದ್ರವು 3 ತಿಂಗಳ ಕೋರ್ಸ್‌ನಲ್ಲಿ ಒಟ್ಟು 36 ಗಂಟೆಗಳ ಅವಧಿಯ ಕಲಿಕಾ ತರಗತಿಗಳನ್ನು ನಡೆಸಿ, ಭಾಗವಹಿಸುವವರಲ್ಲಿ ಕನ್ನಡದಲ್ಲಿ ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಲಿಯುವವರ ಅನುಕೂಲಕ್ಕೆ ಅನುಗುಣವಾಗಿ ತರಗತಿ ಸಮಯವನ್ನು ನಿಗದಿಪಡಿಸಲಾಗಿದೆ. ವಾರಕ್ಕೆ ಮೂರು ಗಂಟೆಗಳ ಕಾಲ ತರಗತಿ ನಿಗದಿಪಡಿಸಲಾಗಿದ್ದು, ಅಗತ್ಯವಿದ್ದರೆ ಅವಧಿಯನ್ನು ವಿಸ್ತರಿಸಬಹುದು. ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಕರ್ನಾಟಕ ಸರ್ಕಾರ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಮಾಣಪತ್ರ ದೊರೆಯುತ್ತದೆ. ಒಂದು ತರಗತಿಯಲ್ಲಿ 30 ಜನರನ್ನು ಮಾತ್ರ ನಿಗದಿಪಡಿಸಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಹೊಸ ತರಗತಿಯು ಪ್ರಾರಂಭವಾಗುತ್ತವೆ.

WhatsApp Image 2025 02 21 at 11.07.26 AM

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರೊ. ನಿರಂಜನರಾಧ್ಯ ವಿ ಪಿ ಕನ್ನಡ ಕಲಿಕಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. “ನಮ್ಮ ಮಾತೃಭಾಷೆಯ ಮೂಲಕವೇ ಎರಡನೇ ಭಾಷೆಯನ್ನು ಕಲಿಯಬೇಕು. ಭಾಷೆಯ ಬಗ್ಗೆ ಅಭಿಮಾನವಿರಲಿ, ಆದರೆ ದುರಭಿಮಾನ ಬೇಡ. ಭಾಷೆಯನ್ನು ಸಹಕಾರ ಸಾಮರಸ್ಯದ ಮೂಲಕ ಕಲಿಯಬೇಕೇ ಹೊರತು ಸಂಘರ್ಷ ಅಥವಾ ಭಯದಿಂದಲ್ಲ. ಕನ್ನಡದ ನೆಲದಲ್ಲಿ ಎಲ್ಲವನ್ನೂ ಪಡೆವ ಕನ್ನಡೇತರರು, ಕನ್ನಡ ಕಲಿತು ಕನ್ನಡಿಗರ ಜೊತೆ ಶಾಂತಿಯುತ ಸಹಬಾಳ್ವೆ ನಡೆಸಲು ಹಿಂದೇಟು ಹಾಕಬಾರದು. ಕನ್ನಡಿಗರ ಶಾಂತಿ ಸಂಯಮವನ್ನು ಅರಿತು ನಡೆಯಬೇಕು” ಎಂದರು.

ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಮಲಯಾಳಂ ಮಿಷನ್ ಕರ್ನಾಟಕದ ಅಧ್ಯಕ್ಷ ಕೆ. ದಾಮೋದರನ್, ಟಾಮಿ ಜೆ. ಅಲುಂಕಲ್, ನ್ಯಾಯವಾದಿ ಬುಶ್ರ ವಲಪ್ಪಿಲ್, ಆರ್ಟ್ ಆಫ್ ಲಿವಿಂಗ್‌ನ ಆರ್ ಶ್ರೀನಿವಾಸ್, ಪ್ರವಾಸಿ ಮಲಯಾಳಿ ಅಸೋಸಿಯೇಷನ್ ​​ವೈಟ್‌ಫೀಲ್ಡ್ ಅಧ್ಯಕ್ಷ ರಮೇಶ್ ಕುಮಾರ್ ವಿ, ಕಾರ್ಯದರ್ಶಿ ರಾಗೇಶ್ ಪಿ, ಸಂತೋಷ್ ಕುಮಾರ್, ಕೇರಳ ಸಮಾಜ ವೈಟ್‌ಫೀಲ್ಡ್ ಜೋನ್ ಸಂಚಾಲಕ ಸುರೇಶ್ ಕುಮಾರ್ ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಮಧ್ಯರಾತ್ರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಕರ್ನಾಟಕ ಸರ್ಕಾರದಿಂದ ವಿಶೇಷ ತರಬೇತಿ ಪಡೆದಿರುವ ಡಾ. ಸುಷ್ಮಾ ಶಂಕರ್ ತರಗತಿಗಳನ್ನು ಮುನ್ನಡೆಸಲಿದ್ದಾರೆ.
ತರಬೇತಿ ಪಡೆದ ಪ್ರೊ. ರಾಕೇಶ್ ವಿ.ಎಸ್ ಮತ್ತು ರೆಬಿನ್ ರವೀಂದ್ರನ್ ತರಗತಿಗಳನ್ನು ನಡೆಸಲಿದ್ದಾರೆ ಎಂದು ಕಲಿಕಾ ಕೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...