ಬೆಂಗಳೂರು | ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ

Date:

Advertisements

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗೆ ನಾವು ಖರ್ಚು ಮಾಡಿದ್ದೇವೆ. ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು  ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisements

ಶ್ರೀನಿವಾಸ್ ಶಾಶ್ವತ ಶಾಸಕ: ಶಾಸಕ ಶ್ರೀನಿವಾಸ್ ಅವರು ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 850 ಕೋಟಿಗೂ ಹೆಚ್ಚು ಹಣವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಶ್ರೀನಿವಾಸ್ ಬಹಳ ಕ್ರಿಯಾಶೀಲ ಶಾಸಕ. ಹಿಡಿದ ಕೆಲಸ ಬಿಡಲ್ಲ. ನನ್ನ ಬಳಿಗೆ ಬಂದಾಗೆಲ್ಲಾ ನೆಲಮಂಗಲದ ಅಭಿವೃದ್ಧಿ ಬಗ್ಗೆಯೇ ಚರ್ಚೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ತರುತ್ತಿದ್ದಾರೆ. ಆದ್ದರಿಂದ ಶ್ರೀನಿವಾಸ್ ಅವರನ್ನು ಶಾಶ್ವತವಾಗಿ ಕಾಂಗ್ರೆಸ್ ನಿಂದ ಗೆಲ್ಲಿಸಿ ಎಂದು ಕರೆ ನೀಡಿದರು.

ಬಡವರನ್ನು ಹೀಯಾಳಿಸುವುದು ಬಿಜೆಪಿ ಚಾಳಿ: ಕೇಂದ್ರದ ಬಿಜೆಪಿ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು. ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ. ಇದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಹೆಚ್.ಮುನಿಯಪ್ಪ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ , ಸಣ್ಣ ನೀರಾವರಿ, ವಿಜ್ಞಾನ & ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ್, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಶರತ್ ಬಚ್ಚೇಗೌಡ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕರಾದ ಎಸ್.ಟಿ.ಸೋಮಶೇಖರ್, ಎನ್.ಶ್ರೀನಿವಾಸ್ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X