ಬೆಂಗಳೂರು | ಮೂರು ದಿನ ಭಾರೀ ಮಳೆ; ಕೆಲವೆಡೆ ಯೆಲ್ಲೋ ಅಲರ್ಟ್‌ ಘೋಷಣೆ

Date:

Advertisements

ರಾಜ್ಯದಲ್ಲಿ ಹಲವೆಡೆ ಮಳೆ ಆರಂಭವಾಗಿದ್ದು, ಮೈಸೂರು ಹಾಗೂ ಬೆಂಗಳೂರಿನ ಅಲ್ಲಲ್ಲಿ ಸೋಮವಾರ ಗುಡುಗು ಸಹಿತ ಭಾರೀ ಮಳೆಯಾಗಿದೆ.

ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬಿಟ್ಟೂ ಬಿಡದೆ ಮಳೆ ಸುರಿದಿದೆ. ಸಂಜೆ ವೇಳೆ ಸುರಿದ ಭಾರೀ ಮಳೆಗೆ ಟ್ರಾಫಿಕ್‌ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಉಂಟಾಗಿತ್ತು.

ಮೈಸೂರಿನಲ್ಲೂ ಅಧಿಕ ಮಳೆ ಸುರಿದಿದ್ದು, ಸತತ ಒಂದೂವರೆ ಗಂಟೆಯಿಂದ ಸುರಿದ ಧಾರಾಕಾರ ಮಳೆಯಿಂದ ಜನ-ಜೀವನ ಅಸ್ತವ್ಯಸ್ತವಾಗಿತ್ತು. ದಿಢೀರ್‌ ಮಳೆಯಿಂದಾಗಿ ಜನರು ಆಶ್ರಯಕ್ಕಾಗಿ ಬಸ್‌ ನಿಲ್ದಾಣಗಳ ಮೊರೆ ಹೋಗುತ್ತಿದ್ದ ದೃಶ್ಯ ಕಂಡುಬಂದಿತ್ತು.

Advertisements

ಮೂರು ದಿನ ಭಾರೀ ಮಳೆಯ ಎಚ್ಚರಿಕೆ

ಸೋಮವಾರ ತಮಿಳುನಾಡು ಮೂಲಕ ಕನ್ಯಾಕುಮಾರಿವರೆಗೆ ಸಮುದ್ರ ಮಟ್ಟದಲ್ಲಿ ಟ್ರಫ್‌(ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಎದ್ದಿದೆ. ಇದರ ಪ್ರಭಾವದಿಂದಾಗಿ ದಕ್ಷಿಣ ಒಳನಾಡಲ್ಲಿ ಇನ್ನು ಮೂರು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದೆ‌ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X