ಬೆಂಗಳೂರು | ಸುಳ್ಳು ಸುದ್ದಿಗಳ ತಡೆಗೆ ಪೊಲೀಸ್ ಇಲಾಖೆ ವಿನೂತನ ಪ್ರಯತ್ನ

Date:

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿ ಕಾನೂನು-ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಯತ್ನಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ಬೆಂಗಳೂರು ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದಕ್ಕಾಗಿ ಪೊಲೀಸರ ಸೋಷಿಯಲ್ ಮೀಡಿಯಾ ವಿಂಗ್ ಕಾರ್ಯನಿರ್ವಹಿಸಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿಯಾಗಿ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಸಮಾಜದ ಶಾಂತಿ ಕದಡುವಂತಹ ಪೋಸ್ಟ್‌ಗಳನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಮಾಜದ ಶಾಂತಿ ಹಾಳು ಮಾಡುವವರ ವಿರುದ್ಧ ಪೊಲೀಸರು ಹೆಚ್ಚಿನ ನಿಗಾ ವಹಿಸಲಿದ್ದು, ಪೊಲೀಸ್ ಠಾಣೆಗಳಲ್ಲಿ ಇಬ್ಬರು ಸಿಬ್ಬಂದಿ ಒಳಗೊಂಡು ಸೋಷಿಯಲ್ ಮೀಡಿಯಾ ವಿಂಗ್ ಕಾರ್ಯ ನಿರ್ವಹಿಸಲಿದೆ. ನಗರದಾದ್ಯಂತ ಎಲ್ಲ ಠಾಣೆಗಳಿಗೂ ಈ ನಿಯಮ ಅನ್ವಯವಾಗಲಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ಪೊಲೀಸರು ಕಣ್ಣಿಡಲಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಗೆ ನಾನಾ ರೀತಿಯಲ್ಲಿ ಉತ್ತೇಜನವಾಗುವಂತಹ ಪೋಸ್ಟ್‌ಗಳನ್ನು ಪ್ರಕಟ ಮಾಡಲಾಗುತ್ತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಸಾಮಾಜಿಕ ಜಾಲತಾಣದ ಖಾತೆಗಳನ್ನು ಮಾನಿಟರ್ ಮಾಡಲು ಪ್ರತಿ ಡಿಸಿಪಿ ಕಚೇರಿಗಳಲ್ಲಿ ತಂಡ ರಚನೆ ಮಾಡಲಾಗಿದೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪರಿಣಿತರ ದೊಡ್ಡ ತಂಡವನ್ನು ರಚನೆ ಮಾಡಲಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ಹಾಗೂ ಫೇಕ್‌ ಪೋಸ್ಟ್‌ಗಳ ಬಗ್ಗೆ ಜನರಿಗೆ ಮನವರಿಕೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನದ ಸಹಾಯದಿಂದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ತಾಂತ್ರಿ ಪರಿಣಿತ ಇರುವ ಸಿಬ್ಬಂದಿ ನೇಮಕ ಮಾಡಲಾಗಿದೆ. ವಿಶೇಷ ತರಬೇತಿ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...