ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ; 3 ತಿಂಗಳು ಅವಧಿ ವಿಸ್ತರಣೆ

Date:

ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯೂರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌-ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಬಾಕಿ ಇರುವಾಗಲೇ ಸರ್ಕಾರ ಗಡುವು ವಿಸ್ತರಣೆ ಮಾಡಿದೆ.

- Advertisement -

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಗಿದೆ. ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2023ರ ಆಗಸ್ಟ್‌ 18ರಂದು ಅಧಿಸೂಚನೆ ಹೊರಡಿಸಿದ್ದ ಸಾರಿಗೆ ಇಲಾಖೆಯು ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾದ ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ನವೆಂಬರ್‌ 17ರವರೆಗೆ ಕಾಲಾವಕಾಶ ನೀಡಿತ್ತು. ರಾಜ್ಯದಲ್ಲಿಅಂತಹ ಸುಮಾರು 2 ಕೋಟಿ ವಾಹನಗಳಿದ್ದು, ನವೆಂಬರ್‌ 17ರ ಗಡುವಿನೊಳಗೆ ಬಹುತೇಕ ಹಳೆ ವಾಹನಗಳ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬಹುದೆಂದು ಇಲಾಖೆ ನಿರೀಕ್ಷಿಸಿತ್ತು. ಆದರೆ, ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಜನರಿಂದ ನಿರೀಕ್ಷಿತ ಸ್ಪಂದನೆ ಸಿಗಲಿಲ್ಲ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸಿಎಎ ಪ್ರತಿಭಟನೆ ವೇಳೆ ‘ಪೋಡಾ ಪುಲ್ಲೇ ಪೊಲೀಸೇ’ ಹೇಳಿಕೆ ಪ್ರಕರಣ: ಆರೋಪಿಗಳು ದೋಷಮುಕ್ತ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫೆಬ್ರವರಿ 17 ರವರೆಗೆ ಗಡುವು ವಿಸ್ತರಿಸುವಂತೆ ಸೂಚಿಸಿದ್ದರು. ಅದರಂತೆ ಸಾರಿಗೆ ಇಲಾಖೆಯು ಫೆಬ್ರವರಿ 17ರವರೆಗೆ ಗಡುವು ವಿಸ್ತರಿಸಿತ್ತು. ಆ ನಂತರವೂ ಸಾರ್ವಜನಿಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಹಿಂದೇಟು ಹಾಕಿದ್ದು, 2 ಕೋಟಿ ಹಳೆ ವಾಹನಗಳಲ್ಲಿ ಈವರೆಗೆ ಸುಮಾರು 18.5 ಲಕ್ಷ ವಾಹನಗಳಿಗೆ ಅಂದರೆ ಶೇ.9 ರಷ್ಟು ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆಯಾಗಿದೆ. ಈಗ ಮತ್ತೆ ಸಮಯ ವಿಸ್ತರಿಸಿದ್ದು, ಅಧಿಕೃತ ಆದೇಶ ಬಾಕಿ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...