ಬೆಂಗಳೂರು | ಕನ್ನಡ ಸಾಹಿತ್ಯ ಸಮ್ಮೇಳನ ಪಾರದರ್ಶಕವಾಗಿರಲಿ: ಎನ್ ಚಲುವರಾಯಸ್ವಾಮಿ

Date:

ಮುಂಬರುವ ಡಿಸೆಂಬರ್‌ ವೇಳೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಸಾಹಿತ್ಯ, ಸಾಂಸ್ಕೃತಿಕ ಶ್ರೀಮಂತಿಕೆಯ ಜತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

- Advertisement -

ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆ ಕುರಿತು ಬೆಂಗಳೂರಿನ ವಿಕಾಸಸೌಧ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ಉಪಸ್ಥಿತಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೃಷಿ ಸಚಿವರು ಕಾರ್ಯಕ್ರಮದ ಸಂಘಟನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಕಾರ್ಯಕ್ರಮದ ಸಂಘಟನೆಯಲ್ಲಿ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಹಣಕಾಸು ಹೊಣೆಗಾರಿಕೆ ಸಂಪೂರ್ಣ ಜಿಲ್ಲಾಡಳಿತಕ್ಕೆ ಸೇರಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರ ಮತ್ತು ಸಹಯೋಗದೊಂದಿಗೆ ಬಜೆಟ್‌ನ ಮಿತಿಯೊಳಗೆ ಆಯೋಜಿಸಬೇಕು” ಎಂದು ತಿಳಿಸಿದರು.

“ಈಗಾಗಲೇ 26 ಉಪಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಗಳಿಗೂ ಸ್ಥಳೀಯ ಶಾಸಕರುಗಳು ನೇತೃತ್ವ ವಹಿಸಿದ್ದು, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಕನ್ನಡದ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ನಡೆಸಬೇಕಾಗಿದೆ” ಎಂದರು.

“ಮಂಡ್ಯ ಜಿಲ್ಲೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂಗಳನ್ನು ಒದಗಿಸುವ ಭರವಸೆ ದೊರತಿದೆ. ಅದರ ಮಿತಿಯೊಳಗೆ ಸಂಪೂರ್ಣ ಕಾರ್ಯಕ್ರಮಗಳು ನಡೆಯಬೇಕು. ಯಾವುದೇ ಕಾರಣಕ್ಕೂ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಸಲ್ಲಿಸುವಂತಿಲ್ಲ” ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದರು.

“ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ದೂರದ ಜಿಲ್ಲೆಗಳಿಂದ ಆಗಮಿಸುವ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಅನುಕೂಲವಾದ ಸ್ಥಳವನ್ನು ಅಂತಿಮಗೊಳಿಸಿ ಸಮ್ಮೇಳನದ ಸಿದ್ದತೆ ಮಾಡಿಕೊಳ್ಳಬೇಕು” ಎಂದು ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಕೃಷಿ ಸಚಿವರು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, “ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಾಡಿನ ಅತಿ ದೊಡ್ಡ ಸಾಂಸ್ಕೃತಿಕ ನುಡಿ ಹಬ್ಬ. ಇದನ್ನು ಅತ್ಯಂತ ಜವಾಬ್ದಾರಿಯಿಂದ ಎಚ್ಚರಿಕೆಯಿಂದ ನಡೆಸಬೇಕಿದೆ” ಎಂದು ಹೇಳಿದರು.

“ಕರ್ನಾಟಕ ರಾಜ್ಯ 50ನೇ ವರ್ಷದ ಸುವರ್ಣ ಸಂಭ್ರಮದ ಅಂಗವಾಗಿ ಬಿಡುಗಡೆ ಮಾಡಿರುವ ಗುರುತು ಎಲ್ಲ ಕಾರ್ಯಕ್ರಮದಲ್ಲಿ ವಿಶೇಷವಾಗಿ ಬಿಂಬಿತವಾಗಬೇಕು. ಖರ್ಚು-ವೆಚ್ಚಗಳಿಗೆ ಹೊಣೆಗಾರಿಕೆ ಇರಬೇಕು. ಹಾಗಾಗಿ ಎಲ್ಲರೂ ಹೊಂದಾಗಿ ಕಾರ್ಯಕ್ರಮವನ್ನು ಆಯೋಜಿಸೋಣ” ಎಂದು ಕರೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ‌ ಮಾತನಾಡಿ, “ಸಮ್ಮೇಳನಾಧ್ಯಕ್ಷರ ಆಯ್ಕೆ, ಕನ್ನಡ ಸಾಹಿತ್ಯ ಸಮ್ಮೇಳನದ ಸ್ವರೂಪ ಗೋಷ್ಟಿಗಳು, ಪುಸ್ತಕ ಮಳಿಗೆ, ಊಟೋಪಚಾರ ಮತ್ತಿತರ ವಿಷಯಗಳ ಬಗ್ಗೆ ಮಾಹಿತಿ ನೀಡಿ ಅನುದಾನವು ಜಿಲ್ಲಾಧಿಕಾರಿಗಳಿಗೆ ಬಿಡುಗಡೆಯಾಗಲಿದ್ದು, ಹಣಕಾಸಿನ ಸಂಪೂರ್ಣ ಜವಾಬ್ದಾರಿ ಜಿಲ್ಲಾಡಳಿತದ ಮೇಲಿರುತ್ತದೆ. ಸಾಹಿತ್ಯ ಪರಿಷತ್ ಸಂಪೂರ್ಣ ಸಹಕಾರ ನೀಡಿ ಸಮ್ಮೇಳನದ ಯಶಸ್ಸಿಗೆ ಶ್ರಮಿಸಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕೆ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ರವಿಕುಮಾರ್, ಉದಯ್ ಗೌಡ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯತಿ ಸಿಇಒ ಶೇಖ್ ತನ್ವೀರ್ ಆಸಿಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು ಹಾಗೂ ಹಲವು ಅಧಿಕಾರಿಗಳು ಸಭೆಯಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...