ಬೆಂಗಳೂರು | ಸಮಯ ಪರಿಪಾಲನೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ಪ್ರಥಮ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಕಳೆದ ಮೂರು ತಿಂಗಳಿನಿಂದ ವಿಶ್ವದ ಅತ್ಯಂತ ಸಮಯ ಪರಿಪಾಲನೆ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

- Advertisement -

ಈ ಬಗ್ಗೆ ದಿಆನ್-ಟೈಮ್ ಫಾರ್ಮೆನ್ಸ್‌ ಮಾಸಿಕ ವರದಿ ಬಿಡುಗಡೆ ಮಾಡಿದ್ದು, “ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ನಿರ್ವಹಿಸುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಕಳೆದ ಮೂರು ತಿಂಗಳುಗಳಿಂದ ವಿಶ್ವದ ಅತ್ಯಂತ ಸಮಯೋಚಿತ ವಿಮಾನ ನಿಲ್ದಾಣವಾಗಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಜುಲೈನಲ್ಲಿ ಶೇ.87.51 ರಷ್ಟು ಸಮಯಪಾಲನೆ, ಆಗಸ್ಟ್‌ನಲ್ಲಿ ಶೇ.89.66 ಹಾಗೂ ಸೆಪ್ಟೆಂಬರ್‌ನಲ್ಲಿ ಶೇ.88.51  ಸಮಯ ಪರಿಪಾಲನೆ ಮಾಡಿದೆ” ಎಂದು ಬಿಐಎಎಲ್‌ ತಿಳಿಸಿದೆ.

ಈ ಶ್ರೇಯಾಂಕವು ನಿಗದಿತ ಸಮಯದ 15 ನಿಮಿಷಗಳೊಳಗೆ ನಿರ್ಗಮಿಸಿದ ವಿಮಾನಗಳ ಶೇಕಡಾವಾರು ಪ್ರಮಾಣವನ್ನು ಅಳೆಯಲಾಗುತ್ತದೆ.

ಸಿರಿಯಮ್‌ನ ಮೌಲ್ಯಮಾಪನ ಪ್ರಕ್ರಿಯೆಯು ವಿಶ್ವಾದ್ಯಂತ ವಿಮಾನ ನಿಲ್ದಾಣಗಳಿಗೆ ವಿಮಾನಯಾನ ಡೇಟಾದ ಸಂಪೂರ್ಣ ಪರಿಶೀಲನೆ ಒಳಗೊಂಡಿರುತ್ತದೆ. ಆಸನ ಸಾಮರ್ಥ್ಯ, ಗೇಟ್ ನಿರ್ಗಮನ, 80 ಪ್ರತಿಶತ ಅಥವಾ ಹೆಚ್ಚಿನ ವ್ಯಾಪ್ತಿ ಮತ್ತು ಹಾರಾಟದ ಪರಿಮಾಣದಂತಹ ಅಂಶಗಳ ಆಧಾರದ ಮೇಲೆ ವಿಮಾನ ನಿಲ್ದಾಣಗಳನ್ನು ವರ್ಗೀಕರಿಸಲಾಗಿದೆ ಎಂದು ವರದಿ ಹೇಳಿದೆ.

ವರ್ಗಗಳಲ್ಲಿ ಜಾಗತಿಕ ವಿಮಾನ ನಿಲ್ದಾಣ (25 – 40 ಮಿಲಿಯನ್ ಪ್ರಯಾಣಿಕರು), ದೊಡ್ಡ ವಿಮಾನ ನಿಲ್ದಾಣ (25 – 40 ಮಿಲಿಯನ್ ಪ್ರಯಾಣಿಕರು), ಮಧ್ಯಮ ವಿಮಾನ ನಿಲ್ದಾಣ (15 – 25 ಮಿಲಿಯನ್ ಪ್ರಯಾಣಿಕರು), ಮತ್ತು ಸಣ್ಣ ವಿಮಾನ ನಿಲ್ದಾಣ (5 – 15 ಮಿಲಿಯನ್ ಪ್ರಯಾಣಿಕರು) ಸೇರಿವೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 88 ಮಾರ್ಗಗಳನ್ನು ಒಳಗೊಂಡಿದೆ. ನೆಟ್‌ವರ್ಕ್ ಮತ್ತು 35 ಏರ್‌ಲೈನ್‌ಗಳೊಂದಿಗೆ ಪಾಲುದಾರಿಕೆ ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಮಂತ್ರಿ ಶಿವಾನಂದ ಪಾಟೀಲ್ ಕೂಡಲೇ ರಾಜೀನಾಮೆ ನೀಡಬೇಕು; ಎಎಪಿ ಒತ್ತಾಯ

2022-23ರಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ 31.91 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಮೂಲಕ ಭಾರತದ ಮೂರನೇ ಅತ್ಯಂತ ಹೆಚ್ಚು ಪ್ರಯಾಣಿಕರನ್ನು ಹೊಂದಿದ ವಿಮಾನ ನಿಲ್ದಾಣ ಎಂದೆನಿಸಿಕೊಂಡಿದೆ.

ಅಗ್ರ ಐದು ಪಟ್ಟಿಯಲ್ಲಿ ಸ್ಥಾನ ಪಡೆದ ಇತರ ವಿಮಾನ ನಿಲ್ದಾಣಗಳೆಂದರೆ, ಉತಾಹ್‌ನ ಸಾಲ್ಟ್ ಲೇಕ್ ಸಿಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಯುಎಸ್‌ಎ), ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಿನ್ನಿಯಾಪೋಲಿಸ್-ಸೇಂಟ್ ಪೌಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎಲ್ ಡೊರಾಡೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...