ಬೆಂಗಳೂರು | ಬಿಎಂಡಬ್ಲ್ಯೂ ಕಾರಿನಿಂದ ₹13.75 ಲಕ್ಷ ಕದ್ದ ಖದೀಮರು

Date:

ಬೆಂಗಳೂರಿನ ಹೊರವಲಯದ ಸರ್ಜಾಪುರ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು, ರಸ್ತೆ ಬದಿ ನಿಂತಿದ್ದ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು ₹13.75 ಲಕ್ಷ ಕದ್ದು ಪರಾರಿಯಾಗಿದ್ದಾರೆ.

- Advertisement -

ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಗಳು ನಡೆಸಿದ ಕೃತ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಒಬ್ಬ ಆರೋಪಿ ಬೈಕ್‌ನಲ್ಲಿ ಕಾಯುತ್ತಿದ್ದಾನೆ. ಅವನ ಸಹಚರ ಬಿಎಂಡಬ್ಲ್ಯೂ ಕಾರಿನ ಚಾಲಕನ ಪಕ್ಕದ ಕಿಟಕಿಯನ್ನು ಒಡೆದು ಹಣವನ್ನು ತೆಗೆದುಕೊಂಡಿದ್ದಾನೆ. ಬಳಿಕ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.

ಐಷಾರಾಮಿ ಕಾರು ಆನೇಕಲ್‌ನ ಕಸಬಾ ಮೂಲದ ಮೋಹನ್ ಬಾಬು(36) ಎಂಬುವರಿಗೆ ಸೇರಿದ್ದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಮುತಗಟ್ಟಿ ಗ್ರಾಮದಲ್ಲಿ ಜಮೀನು ನೋಂದಣಿ ಮಾಡಲು ನನ್ನ ಸ್ನೇಹಿತನಿಂದ ₹5 ಲಕ್ಷ ಎರವಲು ಪಡೆದಿದ್ದೆ, ಜತೆಗೆ ಜಮೀನು ಖರೀದಿಗೆ ನಗದು ಹಣವನ್ನು ತಂದಿದ್ದೆ” ಎಂದು ಬಾಬು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿಲ್ಲದೆ ಒಣಗುತ್ತಿವೆ ಧೋಬಿ ಘಾಟ್‌ಗಳು; ಕಾರ್ಮಿಕರ ಜೀವನ ಅತಂತ್ರ

ಬಾಬು ಮತ್ತು ಅವರ ಸಂಬಂಧಿ ರಮೇಶ್ ಅವರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿ ಗಿರಿಯಾಸ್ ಔಟ್‌ಲೆಟ್ ಬಳಿ ಮಧ್ಯಾಹ್ನ 1:30 ರ ಸುಮಾರಿಗೆ ಕಾರನ್ನು ನಿಲ್ಲಿಸಿದರು. ಮಧ್ಯಾಹ್ನ 2.30ಕ್ಕೆ ಬಾಬು ಹಿಂತಿರುಗಿ ನೋಡಿದಾಗ ಕಾರಿನ ಗಾಜು ಒಡೆದಿದ್ದು, ಬ್ಯಾಗ್‌ನಲ್ಲಿ ಇಟ್ಟಿದ್ದ ಹಣ ನಾಪತ್ತೆಯಾಗಿತ್ತು. ನಂತರ ಸರ್ಜಾಪುರ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು.

ಸಂತ್ರಸ್ತ ನೀಡಿದ ದೂರಿನ ಮೇರೆಗೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...