ಬೆಂಗಳೂರು | ಬೈಯಪ್ಪನಹಳ್ಳಿ-ಕೆಆರ್ ಪುರ ನಡುವಿನ ಮೆಟ್ರೋ ಸೇವೆಗೆ ಅ.2ರಂದು ಚಾಲನೆ

Date:

ಬೈಯಪ್ಪನಹಳ್ಳಿ-ಕೆ.ಆರ್ ಪುರ ಮೆಟ್ರೋ ನಿಲ್ದಾಣ ನಡುವೆ ಬಾಕಿ ಉಳಿದಿದ್ದ 2 ಕಿಮೀ ಮಾರ್ಗದ ಕಾಮಗಾರಿ ಪೂರ್ಣಗೊಂಡಿರುವುದರಿಂದ ಅಕ್ಟೋಬರ್‌ 2ರಂದು ಗಾಂಧಿ ಜಯಂತಿ ದಿನ ಮೆಟ್ರೋ ರೈಲು ವಾಣಿಜ್ಯ ಸೇವೆಗೆ ಚಾಲನೆ ನೀಡಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಮಿಟೆಡ್‌(ಬಿಎಂಆರ್‌ಸಿಎಲ್‌) ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಸೂಚನೆ ನೀಡಿದೆ.

- Advertisement -

ಸೆಪ್ಟೆಂಬರ್ 21ಕ್ಕೆ ದೆಹಲಿಯ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು‌ ಬೈಯಪ್ಪನಹಳ್ಳಿ-ಕೆ ಆರ್ ಪುರ ಮೆಟ್ರೋ ಮಾರ್ಗದ ಸುರಕ್ಷತಾ ಪರಿಶೀಲನೆ ನಡೆಸಿದ್ದರು. ಇದೀಗ ವಾಣಿಜ್ಯ ಸೇವೆ ಆರಂಭಿಸಲು ಹಸಿರು ನಿಶಾನೆ ನೀಡಿರುವುದರಿಂದ ಕೆಂಗೇರಿಯಿಂದ ವೈಟ್‌ಫೀಲ್ಡ್‌ವರೆಗೆ ತಡೆರಹಿತ ಸಂಚಾರಕ್ಕೆ ಅನುಕೂಲವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೆಂಗೇರಿಯಿಂದ ಹಾಗೂ ವೈಟ್‌ಫೀಲ್ಡ್ ಮೆಟ್ರೋ ಮಾರ್ಗದಿಂದ ಸಾವಿರಾರು ಐಟಿ ಉದ್ಯೋಗಿಗಳಿಗೆ ಇದರ ಪ್ರಯೋಜನ ಸಿಗಲಿದೆ. ಈ ಮಾರ್ಗ ನಿರ್ಮಾಣ ಅಪೂರ್ಣವಾಗಿದ್ದರಿಂದ ಐಟಿ ಉದ್ಯೋಗಿಗಳು ಕಷ್ಟಪಡುತ್ತಿದ್ದರು. ಬೆಳಿಗ್ಗೆ ಹಾಗೂ ಸಂಜೆ ಅವಧಿಯಲ್ಲಿ ಈ ಮಾರ್ಗದಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆಯಿಂದಾಗಿ ವಾಹನ ಸವಾರರು ಪರದಾಡುತ್ತದ್ದಾರೆ. ಈ ಮಾರ್ಗದ ಮೆಟ್ರೋ ಆರಂಭವಾದರೆ ಹೆಚ್ಚಿನ ಮಂದಿ ಮೆಟ್ರೋ ಅವಲಂಭಿಸಲಿದ್ದು, ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮೋಡ ಬಿತ್ತನೆ ಕಾರ್ಯಾಚರಣೆ ಆರಂಭ; ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಯತ್ನ

ಕೆಂಗೇರಿಯಿಂದ ವೈಟ್‌ ಫೀಲ್ಡ್‌ ಕಡೆಗೆ ಸಾಗುತ್ತಿದ್ದ ಪ್ರಯಾಣಿಕರು ಬೈಯಪ್ಪನಹಳ್ಳಿಯಲ್ಲಿ ಇಳಿದು 2 ಕಿಮೀ ಬಸ್‌ನಲ್ಲಿ ತೆರಳಿ ಮತ್ತೆ ಕೆ.ಆರ್.ಪುರದಲ್ಲಿ ಮೆಟ್ರೋ ಹತ್ತಿ ಮುಂದೆ ಸಾಗಬೇಕಿತ್ತು. ಇದರಿಂದ ಮೆಟ್ರೊ ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಉಂಟಾಗುತ್ತಿತ್ತು. ಈ ಮಾರ್ಗದಲ್ಲಿ ಇದೀಗ ಮೆಟ್ರೋ ಆರಂಭವಾಗುವುದರಿಂದ ಪ್ರಯಾಣಿಕರ ಸ್ಥಿತಿ ಸುಧಾರಿಸಬಹುದು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...