ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಮತ್ತೊಂದು ಟೋಲ್‌ ಹೊರೆ; ಮಂಡ್ಯದಲ್ಲಿ ಸುಂಕ ವಸೂಲಿ ಆರಂಭ

Date:

ಅಪಘಾತಗಳ ಹೆದ್ದಾರಿ ಎಂಬ ಕುಖ್ಯಾತಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪಾತ್ರವಾಗಿದೆ. ಈ ಎಕ್ಸ್‌ಪ್ರೆಸ್‌ವೇನಲ್ಲಿ ಈಗ ವಿಧಿಸಲಾಗುತ್ತಿರುವ ಟೋಲ್‌ ದರವನ್ನೇ ಕಡಿಮೆ ಮಾಡಬೇಕೆಂದು ಹಲವಾರು ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಇದೇ ರಸ್ತೆಯ 2ನೇ ಹಂತದ ಟೋಲ್‌ ಸಂಗ್ರಹವನ್ನು ಆರಂಭವಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಮಂಡ್ಯ ಜಿಲ್ಲೆಯ ಗಣಂಗೂರು ಬಳಿ ನಿರ್ಮಾಣವಾಗಿರುವ ಟೋಲ್‌ ಪ್ಲಾಜಾದಲ್ಲಿ ಜುಲೈ 1ರಿಂದ ಸುಂಕ ವಸೂಲಿ ಆರಂಭವಾಗಲಿದೆ.

ಮೊದಲ ಹಂತದಲ್ಲಿ ಬೆಂಗಳೂರು ಮತ್ತು ಮದ್ದೂರು ತಾಲೂಕಿನ ನಿಡಘಟ್ಟವರೆಗೆ ಟೋಲ್‌ ಸಂಗ್ರಹ ಮಾಡಲಾಗುತ್ತಿದೆ. ಇದೀಗ, ಎರಡನೇ ಹಂತದಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ಟೋಲ್‌ ಸಂಗ್ರಹಕ್ಕೆ ಮುಂದಾಗಿದ್ದು, ಶ್ರೀರಂಗಪಟ್ಟಣದ ಗಣಂಗೂರು ಟೋಲ್‌ನಲ್ಲಿ ಸುಂಕ ವಸೂಲಿ ಶನಿವಾರದಿಂದ ಪ್ರಾರಂಭವಾಗಲಿದೆ ಎಂದು ಹೆದ್ದಾರಿ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಒಂದನೇ ಹಂತದಲ್ಲಿ ಬಿಡದಿ ಬಳಿಕ ಕಣಮಿಣಕಿ ಟೋಲ್‌ನಲ್ಲಿ ಸುಂಕ ವಸೂಲಿ ಮಾಡಲಾಗುತ್ತಿತ್ತು. ಈ ಸುಂಕವು ಬೆಂಗಳೂರಿನಿಂದ ನಿಡಘಟ್ಟದವರೆಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿತ್ತು. ಇದೀಗ, ಎರಡನೇ ಹಂತದಲ್ಲಿ ಗಣಂಗೂರು ಟೋಲ್‌ನಲ್ಲಿ ಸುಂಕ ವಸೂಲಿ ಆರಂಭವಾಗಲಿದೆ. ಇದು ನಿಡಘಟ್ಟದಿಂದ ಮೈಸೂರಿನವರೆಗೆ ಅನ್ವಯವಾಗಲಿದೆ. ಅಂತಯೇ ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವವರು ಎರಡು ಕಡೆ ಟೋಲ್‌ ಪಾವತಿ ಮಾಡಬೇಕಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ನಿಡಘಟ್ಟ ಮತ್ತು ಮೈಸೂರು ನಡುವಿನ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಮುಗಿದಿಲ್ಲ. ಆರು ಪಥದ ರಸ್ತೆಯ ಕಾಮಗಾರಿಯಷ್ಟೇ ಮುಗಿದಿದೆ. ಇನ್ನೂ ಎರಡೂ ಬದಿಯ ನಾಲ್ಕು ಪಥದ ಸರ್ವೀಸ್‌ ರಸ್ತೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ರಸ್ತೆ ಬದಿಯಲ್ಲಿ ಚರಂಡಿಗಳ ನಿರ್ಮಾಣವಾಗಿಲ್ಲ. ಹಲವೆಡೆ ಕೆಳ ಸೇತುವೆಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲಾಗಿಲ್ಲ. ಸರ್ವೀಸ್‌ ರಸ್ತೆ ಪೂರ್ಣಗೊಳ್ಳದೆ ಟೋಲ್ ವಸೂಲಿ ಮಾಡಬಾರದು ಎಂದು ಆಗ್ರಹಗಳು ಕೇಳಿಬಂದಿವೆ.

“ಸರ್ವೀಸ್‌ ರಸ್ತೆ ಪೂರ್ಣಗೊಳ್ಳದೆ ಟೋಲ್‌ ವಸೂಲಿ ಆರಂಭಿಸಬಾರದು” ಎಂದು ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಕೂಡ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ, ಟೋಲ್‌ ಸುಂಕ ಆರಂಭಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ...

ವಿಜಯಪುರ | ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳನ್ನು ತಿರಸ್ಕರಿಸಿ: ಸುನೀತ್‌ಕುಮಾರ

ಕೇವಲ ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಳನ್ನು ತಿರಸ್ಕರಿಸಿ,...