ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ: ಟೋಲ್ ಪ್ಲಾಜಾ ನೌಕರನ ಹತ್ಯೆ

Date:

  • ಕ್ಷುಲ್ಲಕ ವಿಚಾರಕ್ಕೆ ಭಾನುವಾರ ರಾತ್ರಿ ನಡೆದಿದ್ದ ಗಲಾಟೆ
  • ಟೋಲ್‌ ಶುಲ್ಕ ಪಾವತಿಯಲ್ಲಿ ವಿಳಂಬವಾದ ವಿಚಾರಕ್ಕೆ ಜಗಳ

ಟೋಲ್ ಶುಲ್ಕ ಪಾವತಿ ವೇಳೆ ವಿಳಂಬವಾದ ಕಾರಣಕ್ಕೆ ಗಲಾಟೆ ನಡೆದು ಟೋಲ್‌ ಪ್ಲಾಜಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇಯಲ್ಲಿರುವ ಶೇಷಗಿರಿ ಟೋಲ್‌ ಪ್ಲಾಜಾ ಬಳಿಕ ನಡೆದಿದೆ.

ಭಾನುವಾರ ರಾತ್ರಿ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಬಿಡದಿ ಪೊಲೀಸ್‌ ಠಾಣೆಯಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ಯುವಕರ ಗುಂಪೊಂದು ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಷೇಶಗಿರಿ ಟೋಲ್‌ನಲ್ಲಿ ಯುವಕ ಕಾರು ಬಂದ ಪಥದಲ್ಲಿಯೇ ಆಟೋವೊಂದು ಟೋಲ್‌ ಪಾವತಿಸುತ್ತಿತ್ತು. ಆಟೋದಲ್ಲಿ ಫಾಸ್ಟಾಗ್‌ ಇಲ್ಲದಿದ್ದ ಕಾರಣ, ಎರಡು ಪಟ್ಟು ಹಣ ಪಾವತಿ ಮಾಡಬೇಕಿತ್ತು. ಆಟೋ ಚಾಲಕ ಟೋಲ್‌ ಶುಲ್ಕ ಕಟ್ಟುವುದು ತಡವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೀಗಾಗಿ, ಆಟೋ ಮುಂದೆ ಹೋದ ಬಳಿಕ ಟೋಲ್‌ ಬೂತ್‌ ಬಳಿ ಬಂದ ಕಾರಿನ ಯುವಕರು ಸಿಬ್ಬಂದಿ ಪವನ್ ಕುಮಾರ್‌ ಜೊತೆ ಗಲಾಟೆ ಮಾಡಿದ್ದು, ಟೋಲ್‌ ಕಟ್ಟಲು ನಿರಾಕರಿಸಿದ್ದಾರೆ. ಈ ವೇಳೆ, ಯುವಕರು ಮತ್ತು ಟೋಲ್‌ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸಿದ್ದಾರೆ. ಬಳಿಕ, ಸ್ಥಳೀಯರು ಮಧ್ಯ ಪ್ರವೇಶಿಸಿ ಎಲ್ಲರನ್ನೂ ಸ್ಥಳದಿಂದ ಕಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ರೋಹಿಣಿ V/S ರೂಪಾ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ

ಆದರೆ, ಅಲ್ಲಿಂದ ಸ್ವಲ್ಪವೇ ದೂರ ಹೋಗಿದ್ದ ಯುವಕರ ಗುಂಪು ಪವನ್ ಬರುವಿಕೆಗಾಗಿ ಕಾದು ಕುಳಿತಿದೆ. ರಾತ್ರಿ 12 ಗಂಟೆ ಸುಮಾರಿಗೆ ಬಿಡುವು ಪಡೆದು ಟೂಲ್‌ಬೂತ್‌ನಿಂದ ಪವನ್ ಹೊರಬಂದಿದ್ದಾರೆ. ಆತನ ಮೇಲೆ ದುಷ್ಕರ್ಮಿ ಯುವಕರು ಹಲ್ಲೆ ಮಾಡಿದ್ದಾರೆ. ಪವನ್, ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮುಂಜಾನೆ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...