ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರ ಬಂಧನ

Date:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿರುವ ಶೇಷಗಿರಿಹಳ್ಳಿ ಟೋಲ್‌ ಸಿಬ್ಬಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಭಾನುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಟೋಲ್‌ ಸಿಬ್ಬಂದಿ ಪವನ್‌ ನಾಯಕ್‌ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಆರಂಭಿಸಿದ್ದರು. ಇದೀಗ, ಬೆಂಗಳೂರಿನ ಸಂಕದಕಟ್ಟೆಯ ಅಭಿಷೇಕ್ ಮತ್ತು ಸಂತೋಷ್‌ ಎಂಬ ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಈ ಇಬ್ಬರೂ, ಆಹಾರ ಪೂರೈಕೆ ಕಂಪನಿಯಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜೂನ್‌ 5ರ ರಾತ್ರಿ ರಾಮನಗರ ಕಡೆಯಿಂದ ಬೆಂಗಳೂರಿಗೆ ಆರೋಪಿಗಳು ಮತ್ತವರ ಸ್ನೇಹಿತರು ಕಾರಿನಲ್ಲಿ ಬಂದಿದ್ದರು. ಈ ವೇಳೆ, ಶೇಷಗಿರಿಹಳ್ಳಿ ಟೋಲ್‌ನಲ್ಲಿ ಟೋಲ್‌ ಶುಲ್ಕ ಪಾವತಿಸಲು ನಿಂತಿದ್ದರು. ಆರೋಪಿಗಳು ಬರುತ್ತಿದ್ದ ಲೇನ್‌ನಲ್ಲಿ ಆಟೋವೊಂದು ಶುಲ್ಕ ಪಾವತಿ ಮಾಡುತ್ತಿತ್ತು. ಆಟೋಗೆ ಫಾಸ್ಟ್ಯಾಗ್‌ ಇಲ್ಲದ ಕಾರಣ, ಪಾವತಿ ಮಾಡುವುದು ತಡವಾಗಿತ್ತು. ಈ ಕಾರಣಕ್ಕಾಗಿ, ಆರೋಪಿಗಳು ಟೋಲ್‌ ಸಿಬ್ಬಂದಿ ಪವನ್‌ ನಾಯಕ್‌ನೊಂದಿಗೆ ಗಲಾಟೆ ಮಾಡಿದ್ದರು ಎಂದು ವರದಿಯಾಗಿತ್ತು.

ಈ ಸುದ್ದಿ ಓದಿದ್ದೀರಾ?: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ₹10 ಸಾವಿರ ದರ ನಿಗದಿ ಆರೋಪ; ತನಿಖೆ ಮಾಡುತ್ತಾ ಆರೋಗ್ಯ ಇಲಾಖೆ?

ಗಲಾಟೆ ಅತೀರೇಕಕ್ಕೆ ಹೋಗಿ, ಸಿಬ್ಬಂದಿಗಳು ಮತ್ತು ಆರೋಪಿಗಳು ಕೈಕೈ ಮಿಲಾಯಿಸಿದ್ದರು. ಅಲ್ಲಿದ್ದ ಸ್ಥಳೀಯರು ಎಲ್ಲರನ್ನೂ ಸಮಾಧಾನಗೊಳಿಸಿ, ಅಲ್ಲಿಂದ ಕಳಿಸಿದ್ದರು. ಆದರೆ, ಆರೋಪಿ ಸಂತೋಷ್ ಮತ್ತು ಅಭಿಷೇಕ್ ಟೋಲ್‌ ಸಮೀಪವೇ ಪವನ್‌ಗಾಗಿ ಕಾದು ಕುಳಿದ್ದರು. ರಾತ್ರಿ 12.30ರ ಸುಮಾರಿಗೆ ಪವನ್ ಕೆಲಸ ಮುಗಿಸಿಕೊಂಡು ತನ್ನ ಸ್ನೇಹಿತ ಮಂಜುನಾಥ್‌ ಜೊತೆ ನಡೆದುಕೊಂಡು ಹೋಗುವಾಗ, ಇಬ್ಬರ ಮೇಲೂ ಆರೋಪಿಗಳು ಏಕಾಏಕಿ ದಾಳಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಯಿಂದ ತಲೆಗೆ ತೀವ್ರವಾಗಿ ಪಟ್ಟಾಗಿದ್ದ ಪವನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಿಸದೆ ಅತ ಮೃತಪಟ್ಟಿದ್ದರು. ಮಂಜುನಾಥ್‌ಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...