ಬೆಂಗಳೂರು | ಆರು ತಿಂಗಳಲ್ಲಿ ಸುಮಾರು 27,000 ಪ್ರಕರಣಗಳಿಂದ ಮೆಟ್ರೋ ರೈಲು ನಿಯಮ ಉಲ್ಲಂಘನೆ

Date:

Advertisements

ಸೆಪ್ಟೆಂಬರ್ 2024ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ವಾಡಿಕೆಯ ಭದ್ರತಾ ತಪಾಸಣೆಯ ಪ್ರಕಾರ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000ಕ್ಕೂ ಅಧಿಕ ಘಟನೆಗಳು ಬಹಿರಂಗವಾಗಿವೆ.

ಪ್ರಯಾಣಿಕರು ಮೊಬೈಲ್‌ನಲ್ಲಿ ಜೋರಾಗಿ ಸಂಗೀತ ಹಾಕಿಕೊಂಡು ಕೇಳುತ್ತಿದ್ದ ಒಟ್ಟು 11,922 ಪ್ರಕರಣಗಳು ದಾಖಲಾಗಿವೆ. ವಿಕಲಾಂಗ ವ್ಯಕ್ತಿಗಳು(ಪಿಡಬ್ಲ್ಯೂಡಿ), ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಶಿಶುಗಳೊಂದಿಗೆ ಪ್ರಯಾಣಿಸುವವರಿಗೆ ಆದ್ಯತೆಯ ಆಸನಗಳನ್ನು ನೀಡದಿರುವಂತಹ 14,162 ಪ್ರಕರಣಗಳು ಹಾಗೂ ರೈಲಿನಲ್ಲಿ ಪ್ರಯಾಣ ಮಾಡುವಾಗ ಪದಾರ್ಥಗಳ ಸೇವನೆ ಮಾಡಿರುವ 554 ಪ್ರಕರಣಗಳು ಕಂಡುಬಂದಿವೆ. ಅಲ್ಲದೆ, 474 ಘಟನೆಗಳು ದೊಡ್ಡ ಗಾತ್ರದ ಲಗೇಜ್ ಸಾಗಿಸುವ ಪ್ರಯಾಣಿಕರನ್ನೂ ಒಳಗೊಂಡಿವೆ.

ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲವಾದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ. ಇದು ಪ್ರಯಾಣಿಕರಲ್ಲಿ ಹೆಚ್ಚಿನ ಅರಿವು ಮತ್ತು ಪರಿಗಣನೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ | ಮೂರುಗೋಳಿಯ ಪ್ರವೀಣ್ ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

ಸುಗಮವಾದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಪಾಲಿಸಲು ಮತ್ತು ದಂಡಗಳ್ನು ವಿಧಿಸುವ ಅವಕಾಶಗಳನ್ನು ತಪ್ಪಿಸಲು ನಿಗಮವು ಪ್ರಯಾಣಿಕರನ್ನು ವಿನಂತಿಸುತ್ತದೆ.

ಸಾರ್ವಜನಿಕರಿಗೆ ಮೇಲಿನ ಮಾಹಿತಿಯ ಬಗ್ಗೆ ವ್ಯಾಪಕ ಪ್ರಚಾರ ನೀಡಲು ಮುದ್ರಣ ಮತ್ತು ಡಿಜಿಟಲ್ ಮಾಧ್ಯಮಗಳನ್ನು ವಿನಂತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X