ಬೆಂಗಳೂರು | ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಪಟ್ಟು ಹಿಡಿದ ಸಂಘಟನೆಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಹಲವಾರು ಸಂಘಟನೆಗಳು ಒತ್ತಾಯಿಸುತ್ತಿವೆ.

- Advertisement -

ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ಆಚರಣೆಗೆ ಪರ ವಿರೋಧ ಮುಗಿದ ಬಳಿಕ ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಕೂಗು ಕೇಳಿಬರುತ್ತಿದೆ. ಚಾಮರಾಜಪೇಟೆ ನಾಗರಿಕ ಒಕ್ಕೂಟದಿಂದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಗೆ ಪಟ್ಟು ಹಿಡಿದಿದ್ದು, ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳಲ್ಲದೆ ಇದೇ ಮೈದಾನದಿಂದ ಕೂಗಳತೆಯ ದೂರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕೂಡ ಮೈದಾನದಲ್ಲಿ ನಾಡಧ್ವಜ ಹಾರಿಸುವಂತೆ ಒತ್ತಡ ಹೇರಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೊಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಮನವಿ ಮಾಡಿಕೊಂಡಿದೆ. ಆದರೆ, ಈ ಮನವಿಯನ್ನು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಅನುಮತಿ ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಚಾಮರಾಜಪೇಟೆ ನಾಗರಿಕ ಒಕ್ಕೂಟವು ನ್ಯಾಯಾಲಯದ​ ಮೊರೆ ಹೋಗಲು ಸಿದ್ಧತೆ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೈಟ್‌ಫೀಲ್ಡ್‌ನ ಒಂದು ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡ ಪತ್ತೆ

ರಾಜ್ಯ ಸರ್ಕಾರ ಕನ್ನಡ ನಾಡಿನಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಪಡಿಸುತ್ತಿದೆ. ಕೂಡಲೇ ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಅನುಮತಿ ನೀಡಬೇಕು. ಒಂದು ವೇಳೆ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು. ಈ ಕುರಿತಂತೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಚಾಮರಾಜಪೇಟೆ ನಾಗರಿಕ ಒಕ್ಕೂಟದ ಖಜಾಂಚಿ ಯಶವಂತ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...