ಬೆಂಗಳೂರು | ಸಂಚಾರ ದಟ್ಟಣೆ ನಿರ್ವಹಣೆಗೆ ಒಆರ್‌ಆರ್‌ಸಿಎ ಸಲಹೆಗಳಿವು

Date:

ಬೆಂಗಳೂರಿನ ಹೊರ ವರ್ತುಲ ರಸ್ತೆ (ಒಆರ್‌ಆರ್) ಸುತ್ತಮುತ್ತಲಿನ ಪ್ರದೇಶಗಳಾದ ಮಾರತ್ತಹಳ್ಳಿ, ಬೆಳ್ಳಂದೂರು, ಸೆಂಟ್ರಲ್ ಸಿಲ್ಕ್ ಬೋರ್ಡ್, ಕೆಆರ್ ಪುರಂ, ಹೆಬ್ಬಾಳ ಮತ್ತು ಗೊರಗುಂಟೆಪಾಳ್ಯದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆಯ ತೀವ್ರತೆ ಹೆಚ್ಚಾಗಿದೆ. ಸಂಚಾರ ದಟ್ಟಣೆಯನ್ನು ನಿವಾರಿಸಲು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್)  ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೊರ ವರ್ತುಲ ರಸ್ತೆಯ ಕಂಪನಿಗಳ ಸಂಘ (ಒಆರ್‌ಆರ್‌ಸಿಎ) ಒತ್ತಾಯಿಸಿದೆ.

- Advertisement -

ಹೊರ ವರ್ತುಲ ರಸ್ತೆಯಲ್ಲಿ ನಡೆಯುವ ಮೆಟ್ರೋ ಕಾಮಗಾರಿಗಳ ಕಾರಣದಿಂದಾಗಿ ಸಂಚಾರ ಮತ್ತಷ್ಟು ದುಸ್ತರವಾಗಿದೆ. ಹೀಗಾಗಿ, ರಸ್ತೆ ಆಸುಪಾಸಿನಲ್ಲಿ ಸೇವಾ ರಸ್ತೆ (ಸರ್ವೀಸ್ ರೋಡ್) ಇರುವುದು ಬಹಳ ಮುಖ್ಯ. ಬಿಬಿಎಂಪಿಯು ಫ್ಲೈಓವರ್‌ಗಳು ಮತ್ತು ಸರ್ವಿಸ್ ರಸ್ತೆಗಳನ್ನು ನಿರ್ವಹಿಸುವತ್ತ ಗಮನ ಹರಿಸಬೇಕು. ಜೊತೆಗೆ, ರಸ್ತೆ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಬಿಎಂಆರ್‌ಸಿಎಲ್ ಕಾಮಗಾರಿ ನಡೆಸಬೇಕು ಎಂದು ಸಂಘ ಒತ್ತಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಅಕ್ರಮ ಪಾರ್ಕಿಂಗ್ ಮತ್ತು ಫುಟ್‌ಪಾತ್ ಒತ್ತುವರಿಯನ್ನು ತಡೆಯಲು ಬಿಬಿಎಂಪಿ ಮತ್ತು ಬೆಂಗಳೂರು ಟ್ರಾಫಿಕ್ ಪೋಲೀಸರು (ಬಿಟಿಪಿ)  ರಚಿಸಿರುವ ತಂಡಗಳು ಸೇವಾ ರಸ್ತೆಗಳಲ್ಲಿ ಪ್ರತಿದಿನ ಗಸ್ತು ತಿರುಗಬೇಕು. ಇದರೊಂದಿಗೆ ಪೀಕ್ ಅವರ್‌ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಬೇಕು. ಜೊತೆಗೆ, ಹತ್ತಿರದ ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲು ಫೀಡರ್ ಬಸ್ ಸೇವೆಗಳನ್ನು ಪರಿಚಯಿಸಬೇಕು. ಮೆಟ್ರೋ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ಮೈಲಿ ಸಂಪರ್ಕವನ್ನು ಒದಗಿಸಲು ಖಾಸಗಿ ಬಸ್‌ಗಳಿಗೆ ಅವಕಾಶ ನೀಡಬೇಕು ಎಂದು ಸಂಘ ಹೇಳಿದೆ.

ಹೊರ ವರ್ತುಲ ರಸ್ತೆಯ ಕಳಪೆ ವಿನ್ಯಾಸ ಮತ್ತು ಪರ್ಯಾಯ ರಸ್ತೆಗಳ ಕೊರತೆಯಿಂದಾಗಿ, ಯಾವೊಂದು ವಾಹನ ರಸ್ತೆಯಲ್ಲಿ ಕೆಟ್ಟು ನಿಂತರೆ, ಇಡೀ ರಸ್ತೆ ಜಾಮ್‌ ಆಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ರಸ್ತೆಯಲ್ಲಿ ಕೆಟ್ಟು ನಿಂತ ವಾಹನಗಳನ್ನು ತಕ್ಷಣವೇ ಖಾಲಿ ಮಾಡಲು ಮೀಸಲಾದ ಟೋಯಿಂಗ್ ವಾಹನದ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಘ ಒತ್ತಾಯಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...