ಬೆಂಗಳೂರು ಮಳೆ | ಮನೆಗಳಿಗೆ ನುಗ್ಗಿದ ಚರಂಡಿ ನೀರು; ಜನಜೀವನ ಅಸ್ತವ್ಯಸ್ತ

Date:

Advertisements
  • ಗಬ್ಬುವಾಸನೆಯಲ್ಲಿಯೇ ಇಡೀ ರಾತ್ರಿ ಕಳೆದ ನಿವಾಸಿಗಳು
  • ಅನುಗ್ರಹ ಬಡಾವಣೆಯಲ್ಲಿ ಪ್ರತಿ ವರ್ಷ ಸಣ್ಣ ಪ್ರಮಾಣದಲ್ಲಿ ಪ್ರವಾಹ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೇವಲ ಅರ್ಧ ಗಂಟೆ ಸುರಿಯುತ್ತಿರುವ ಮಳೆಯನ್ನು ತಡೆದುಕೊಳ್ಳದ ಉದ್ಯಾನನಗರಿ ರಸ್ತೆಗಳ ತುಂಬೆಲ್ಲ ನೀರು ನಿಂತಿದೆ. ಇನ್ನೂ ಕೆಲವು ಬಡಾವಣೆಯ ನೂರಾರು ಮನೆಗಳಿಗೆ ಒಳಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಹಿನ್ನೆಲೆ, ಚರಂಡಿಗೆ ಕಟ್ಟಿದ ಗೋಡೆಯನ್ನು ಕೆಡವಲಾಗಿದೆ. ಕಾಮಗಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಮಂಗಳವಾರ ಸುರಿದ ಮಳೆಗೆ ನೂರಾರು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಇದರಿಂದ ರಾತ್ರಿಯಿಡಿ ಜನರು ನಿದ್ದೆ ಇಲ್ಲದೇ ಗಬ್ಬು ವಾಸನೆಯಲ್ಲಿ ಇಡೀ ರಾತ್ರಿ ಕಳೆಯುವಂತಾಯಿತು.

“ಚರಂಡಿ ಕಾಮಗಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ. ಇದರಿಂದ ಚರಂಡಿ ನೀರು ಮನೆಗಳಿಗೆ ನುಗ್ಗಿದೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಚರಂಡಿ ನೀರಿನಲ್ಲಿ ಮುಳುಗಿ ಹೋಗಿವೆ. ಮನೆಗಳಿಗೆ ನೀರು ನುಗ್ಗಿದರಿಂದ ಜನ ಇಷ್ಟೇಲ್ಲಾ ಕಷ್ಟಗಳನ್ನು ಅನುಭವಿಸುತ್ತಿದ್ದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ದೇವರಚಿಕ್ಕನಹಳ್ಳಿಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಮನೆಗೆ ಚರಂಡಿ ನೀರು ನುಗ್ಗಿ ತುಂಬಾ ಅವಾಂತರ ಸೃಷ್ಟಿಯಾಗಿದೆ. ಗಬ್ಬು ವಾಸನೆಯಲ್ಲಿಯೇ ದಿನ ಕಳೆಯುವಂತಾಗಿದೆ. ರಾತ್ರಿಯೆಲ್ಲಾ ಮಳೆಯ ನೀರನ್ನು ಹೊರಹಾಕುವುದೇ ಕೆಲಸವಾಗಿತ್ತು. ಇದೆಲ್ಲಾ ಸಂಪೂರ್ಣವಾಗಿ ಸರಿ ಹೋಗಬೇಕೆಂದರೆ ಇನ್ನೂ ಎರಡು ದಿನ ಬೇಕಾಗುತ್ತಿದೆ. ಚರಂಡಿಗೆ ಮಳೆಗಾಲಕ್ಕೂ ಮುನ್ನವೇ ಮೊದಲೇ ಗೋಡೆ ಕಟ್ಟಿದರೇ ಇಷ್ಟೇಲ್ಲ ಸಮಸ್ಯೆ ಇರುತ್ತಿರಲಿಲ್ಲ” ಎಂದರು.

“ಚರಂಡಿ ನೀರು ನುಗ್ಗಿರುವದರಿಂದ ಮನೆಯಲ್ಲಾ ವಾಸನೆಯಿದೆ. ಮನೆಯಲ್ಲಿ ಮಲಗಿಕೊಳ್ಳುವುದು ಕಷ್ಟಕರವಾಗಿದೆ. ಬೇರೆಯವರ ಮನೆಗೆ ಹೋಗಿ ಮಲಗಿಕೊಳ್ಳುತ್ತಿದ್ದೇವೆ. ನಾವು ಬಾಡಿಗೆ ಮನೆಯಲ್ಲಿರುವವರು ಮನೆ ಖಾಲಿ ಮಾಡಬೇಕೆಂದರೆ ಅವಧಿ ಮುಗಿಯುವವರಿಗೆ ನೀಡಿದ ಡೌನ್ ಪೆಮೇಂಟ್‌ ಕೊಡುವುದಿಲ್ಲ ಎಂದು ಮನೆ ಮಾಲೀಕರು ಹೇಳುತ್ತಾರೆ. ಇತ್ತ ಕಡೆ ಬಿಬಿಎಂಪಿ ಅಧಿಕಾರಿಗಳು ಬಂದು ನಮ್ಮ ಸಮಸ್ಯೆ ಬಗೆಹರಿಸುತ್ತಿಲ್ಲ” ಎಂದು ನೋವು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ಅನುಗ್ರಹ ಬಡಾವಣೆ ಜನರ ಗೋಳು

ಅನುಗ್ರಹ ಬಡಾವಣೆಯ ರಸ್ತೆಗಳಲ್ಲಿ ಮಂಡಿಯುದ್ದಕ್ಕೂ ಕೊಳಚೆ ನೀರು ನಿಂತಿತ್ತು. ಬಡಾವಣೆಯಲ್ಲಿರುವ ಹಲವಾರು ಮನೆಗಳಿಗೆ ನೀರು ನುಗ್ಗಿತ್ತು. ಮನೆಯವರು ನೀರನ್ನು ಹೊರಹಾಕಲು ರಾತ್ರಿಯೆಲ್ಲಾ ಹರಸಾಹಸ ಪಡುವಂತಾಯಿತು.

ಬೊಮ್ಮನಹಳ್ಳಿ ವಲಯ ಬಿಬಿಎಂಪಿ ಜಂಟಿ ಆಯುಕ್ತ ಕೃಷ್ಣಮೂರ್ತಿ ಮಾತನಾಡಿ, “ಅನುಗ್ರಹ ಬಡಾವಣೆ ತಗ್ಗು ಪ್ರದೇಶದಲ್ಲಿದೆ. ಪ್ರತಿ ವರ್ಷ ಇಲ್ಲಿ ಸ್ವಲ್ಪ ಪ್ರಮಾಣದಲ್ಲಿ ಪ್ರವಾಹವಾಗುತ್ತದೆ. ಈ ಹಿಂದೆ ನೀರು ಹರಿವಿಕೆ ಕಡಿಮೆ ಪ್ರಮಾಣದಲ್ಲಿ ಇತ್ತು. ಇದೀಗ ಕಟ್ಟಡ ನಿರ್ಮಾಣ ಹೆಚ್ಚಾಗಿದೆ. ಕಾಂಕ್ರೀಟ್ ರಸ್ತೆಗಳಾಗಿವೆ. ಇದರಿಂದ ನೀರು ಹರಿಯುವ ಪ್ರಮಾಣ ಹೆಚ್ಚಾಗಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X