ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ ಎನ್ ಗರುಡಾಚಾರ್ (96) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ಸಂಸ್ಕಾರವು ವಿಲ್ಸನ್ ಗಾರ್ಡನ್‌ನಲ್ಲಿ ಶನಿವಾರ (ಮಾ.29) ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗರುಡಾಚಾರ್ ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಬಿಂಡಿಗೇನವಿಲೆ ಗ್ರಾಮದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬೆಂಗಳೂರು ಜಿಲ್ಲೆಯ ಎಸ್‌ಪಿ ಹಾಗೂ ನಗರದ ಡಿಎಸ್‌ಪಿಯಾಗಿ, ಪೊಲೀಸ್ ಕಮಿಷನರ್ ಆಗಿ, ಐಜಿ, ಡಿಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್ ಡಿಕ್ಕಿ; ಇಬ್ಬರ ಸಾವು
ಮೃತರಿಗೆ ಶಾಸಕ ಉದಯ್ ಗರುಡಾಚಾರ್ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.