ಬೆಂಗಳೂರು ಗ್ರಾಮಾಂತರ | 92 ಕೆ.ಜಿ ಗಾಂಜಾ, ಕಾರು ವಶ; ಆರೋಪಿಗಳು ಪರಾರಿ

Date:

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 92 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. 

ನಗರದ ದೇವನಗೊಂದು ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಮತ್ತು ಪೊಲೀಸರು ವಾಹನಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದ. ಆಗ ವಾಣಿಜ್ಯ ತೆರಿಗೆ ಅಧಿಕಾರಿಗಳು ಮತ್ತು ಪೊಲೀಸರು ಕಾರನ್ನು ಬೆನ್ನಟ್ಟಿದ್ದರು. ಇದನ್ನು ಕಂಡ ಆರೋಪಿಗಳು ಕಾರನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

“ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲಾ ಎರಡು ಕೆಜಿಯ ಒಟ್ಟು 46 ಗಾಂಜಾ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಗಾಂಜಾ ಸಹಿತ ಕಾರು ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ” ಎಂದು ಹೊಸಕೋಟೆ ವಿಭಾಗದ ಡಿವೈಎಸ್‌ಪಿ ಶಂಕರೇಗೌಡ ಪಾಟೀಲ ತಿಳಿಸಿದ್ದಾರೆ. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗದಗ | ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆ

ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ ಓಮ್ನಿ ವಾಹನವೊಂದು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಹಿಂಬಾಲಿಸಿ ಅಧಿಕಾರಿಗಳು ಮತ್ತು ಪೊಲೀಸರು ವಾಹನದ ಸಮೇತ 92 ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಹಿನ್ನೆಲೆ

ಮಾರುತಿ ಓಮ್ನಿ ವಾಹನದಲ್ಲಿ ಗಾಂಜಾವನ್ನು ತುಂಬಿಕೊಂಡು ದುಷ್ಕರ್ಮಿಗಳು ಹೊರಟ್ಟಿದ್ದರು. ಹೊಸಕೋಟೆ ತಾಲೂಕಿನ ದೇವನಗೊಂದಿ ವ್ಯಾಪ್ತಿಯ ರಿಂಗ್ ರೋಡ್ ನಿರ್ಮಾಣವಾಗುತ್ತಿರುವ ಪ್ರದೇಶದಲ್ಲಿ ಮಾಲೂರು ಕಡೆಯಿಂದ ಹೊಸಕೋಟೆ ಕಡೆ ಬರುತ್ತಿದ್ದ ಮಾರುತಿ ಓಮ್ನಿ ವ್ಯಾನ್(ಕೆ.ಎ 03 ಎಂಜಿ 7649) ಅನ್ನು ರಸ್ತೆ ಬದಿಯಲ್ಲಿದ್ದ ವಾಣಿಜ್ಯ ತೆರಿಗೆ ಅಧಿಕಾರಿಗಳು ತಪಾಸಣೆಗೆ ನಿಲ್ಲಿಸಲು ಸೂಚಿಸಿದ್ದಾರೆ. ಆದರೆ, ವ್ಯಾನ್‌ನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಸ್ವಲ್ಪ ದೂರದಲ್ಲೇ ಇದ್ದ 112 ಪೊಲೀಸ್ ವಾಹನ ಹಾಗೂ ವಾಣಿಜ್ಯ ತೆರಿಗೆ ಅಧಿಕಾರಿಗಳು ಬೆನ್ನಟ್ಟಿದ್ದಾರೆ. ಇದನ್ನು ಅರಿತ ದುಷ್ಕರ್ಮಿಗಳು ವಾಹನ ನಿಲ್ಲಿಸಿ ಪರಾರಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ...

ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ...

ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ...

ಚಿಂತಾಮಣಿ | ಬೊಲೆರೋ ಟೆಂಪೋ ಬಸ್ ನಡುವೆ ಅಪಘಾತ; ಚಾಲಕ ಸಾವು

ಬೊಲೆರೋ ಟೆಂಪೊಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ...