ಗ್ಯಾಸ್ ಕಟರ್ ಬಳಸಿ ಎಟಿಎಂ ದರೋಡೆ ಮಾಡಿರುವ ಖದೀಮರು ₹30 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಮಾರ್ಚ್ 1ರ ಮುಂಜಾನೆ 3ರ ಸಮಯದಲ್ಲಿ ಕೃತ್ಯ ನಡೆದಿದೆ. ಆಂಧ್ರಪ್ರದೇಶ ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿರುವ ಖದೀಮರು, ಗ್ಯಾಸ್ ಕಟರ್ ಬಳಸಿ, ಎಟಿಎಂ ಮಷೀನನ್ನು ಕತ್ತರಿಸಿ ಅದರದಲ್ಲಿದ್ದ ₹30 ಲಕ್ಷ ನಗದನ್ನು ದೋಚಿದ್ದಾರೆ.
ಗುರುತು ಸಿಗಬಾರದೆಂಬ ಕಾರಣಕ್ಕೆ ಸಿಸಿ ಕ್ಯಾಮೆರಾಕ್ಕೆ ಸ್ಪ್ರೇ ಮಾಡಿದ್ದು, ಎಟಿಎಂನಿಂದ ₹30 ಲಕ್ಷ ಹಣ ದೋಚಿದ್ದಾರೆ. ಕಳವು ಮಾಡಿದ ನಂತರ ಹೊಸಕೋಟೆ ಮಾರ್ಗವಾಗಿ ಕಳ್ಳರು ಪರಾರಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವರದಹಳ್ಳಿಯಲ್ಲಿ ಹಕ್ಕಿಜ್ವರ ಪ್ರಕರಣ ಪತ್ತೆ; 442 ಕೋಳಿಗಳ ಮಾರಣಹೋಮ
ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ ಕೆ ಬಾಬಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.