ಬೆಂ.ಗ್ರಾಮಾಂತರ | ಮಾ.4ರಂದು ನೆಲಮಂಗಲಕ್ಕೆ ಮುಖ್ಯಮಂತ್ರಿ ಭೇಟಿ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

Date:

ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 4ರಂದು ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಪೂರ್ಣ ಮಾಹಿತಿಯೊಂದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿ 243 ಎಂಎಲ್‌ಡಿ ನೀರನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 70 ಕೆರೆಗಳಿಗೆ ನೀರು ತುಂಬಿಸುವ ಮೊದಲನೇ ಹಂತದ ಕಾಮಗಾರಿಗೆ (1081ಕೋಟಿ) ಶಂಕುಸ್ಥಾಪನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನೆಲಮಂಗಲ ತಾಲೂಕಿನಲ್ಲಿ ಕೈಗೊಂಡಿರುವ ಹಲವು ಇಲಾಖೆಗಳ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮವು ನೆಲಮಂಗಲ ತಾಲೂಕಿನ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕಿದೆ” ಎಂದರು.

“ಶಿಷ್ಟಾಚಾರದಂತೆ ನಾಲ್ಕು ಜಿಲ್ಲೆಗಳನ್ನು ಪ್ರತಿನಿಧಿಸುವ ಆಮಂತ್ರಣ ಪತ್ರಿಕೆ ಸಿದ್ದಪಡಿಸಿ, ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ‌, ಪಂಚಾಯತ್ ರಾಜ್ ಇಲಾಖೆ, ಕೆಪಿಟಿಸಿಎಲ್‌ನ ಕಾಮಗಾರಿಗಳು
ಶಂಕುಸ್ಥಾಪನೆ ಮತ್ತು ಉದ್ಘಾಟನೆಗೊಳ್ಳಲಿದ್ದು, ಸಂಪೂರ್ಣ ವಿವರ ನೀಡಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...