ಬೆಂ.ಗ್ರಾ | ಮದ್ಯ ವ್ಯಸನಿಗಳ ತಾಣವಾದ ಕಾಲೇಜು ಮೈದಾನ

Date:

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನ ಮದ್ಯ ವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಲೇಜಿನ ಮೈದಾನಕ್ಕೆ ಸೂಕ್ತ ಕಾವಲು ಹಾಗೂ ತಡೆಗೋಡೆ ಇಲ್ಲದ ಕಾರಣ ಮದ್ಯ ವ್ಯಸನಿಗಳು ರಾತ್ರಿ‌ಯಾದರೆ ಇಲ್ಲಿಯೇ ಮದ್ಯಪಾನ ಕೂಟ ನಡೆಸುತ್ತಾರೆ. ಅಲ್ಲದೆ ಮದ್ಯ ಸೇವಿಸಿ, ಬಾಟಲಿಗಳನ್ನು ಮೈದಾನದಲ್ಲಿಯೇ ಬಿಸಾಡಿ ಹೋಗಿರುತ್ತಾರೆ. ಇಲ್ಲವೇ ಒಡೆದು ಹಾಕಿರುತ್ತಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಕಾಲೇಜು ಮೈದಾನದಲ್ಲಿ ವಾಯುವಿಹಾರ ಮಾಡುವವರ ಕಾಲಿಗೆ ಗಾಜು ಚುಚ್ಚಿಕೊಂಡು ಗಾಯವಾಗಿತ್ತು. ಮದ್ಯ ವ್ಯಸನಿಗಳ ಕಾಟದಿಂದ ಮಹಿಳೆಯರು, ಹಿರಿಯರು ಇಲ್ಲಿ ಸಂಜೆ ವೇಳೆ ವಾಯುವಿಹಾರಕ್ಕೆ ಬರುವುದನ್ನೇ ನಿಲ್ಲಿಸಿದ್ದಾರೆ” ಎಂದು ದೂರಿದ್ದಾರೆ.

“ಕಾಲೇಜಿನ ಮೈದಾನ ಸ್ವಚ್ಛತೆ ಪೌರಕಾರ್ಮಿಕರಿಗೆ ಸವಾಲಾಗಿದ್ದು, ನಿತ್ಯ ಬಾಟಲಿ ಚೂರುಗಳನ್ನು ಎತ್ತುವ ಪೌರಕಾರ್ಮಿರಿಗೆ ಗಾಜು ಚುಚ್ಚಿಕೊಂಡು ಗಾಯಗೊಂಡಿದ್ದಾರೆ. ಹಾಗಾಗಿ ಮೈದಾನದ ಸುತ್ತಲೂ ವಿದ್ಯುತ್ ದೀಪ ಅಳವಡಿಸಬಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವವರ ಮೇಲೆ ಪ್ರಕರಣ ದಾಖಲಿಸಬೇಕು. ಸಂಜೆ 7 ಗಂಟೆಯ ನಂತರ ಇಲ್ಲಿಗೆ ಬೀಟ್ ವ್ಯವಸ್ಥೆ ಹೆಚ್ಚಿಸಬೇಕು” ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

“ಪಟ್ಟಣದಲ್ಲಿರುವ ಏಕೈಕ ಮೈದಾನ ಇದಾಗಿದೆ. ಈ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳನ್ನೂ ಆಚರಿಸಲಾಗುತ್ತದೆ. ನಮ್ಮ ಕಾರ್ಮಿಕರು ಸ್ವಚ್ಚತೆ ಮಾಡುವಾಗ ಹಲವರು ಗಾಯಗೊಂಡಿರುವ ಉದಾಹರಣೆಗಳೂ ಇವೆ. ಮೈದಾನಕ್ಕೆ ವಿದ್ಯುತ್ ದೀಪಗಳನ್ನು ಅಳವಡಿಸುವ ವಿಚಾರವನ್ನು ಸಭೆಯಲ್ಲಿ ಮಂಡನೆ ಮಾಡಿ ಅನುದಾನ ಕ್ರೋಢೀಕರಣ ಮಾಡಿಕೊಂಡು ಕ್ರಮಕೈಗೊಳ್ಳಲಾಗುತ್ತದೆ” ಪುರಸಭೆ ಮುಖ್ಯಾಧಿಕಾರಿ ಸಂತೋಷ್ ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X