ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ ತಾಯಿ–ತಂದೆ ಸೇರಿದಂತೆ ಒಂದೇ ಕುಟುಂಬದ ಮೂವರೂ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮರಿಯಪ್ಪ(70), ಮುನಿಯಮ್ಮ(60) ಮತ್ತು ದಂಪತಿಯ ಪುತ್ರಿ ಭಾರತಿ(40) ಕೆರೆಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಕೈತೊಳೆಯಲು ಕೃಷಿ ಹೊಂಡಕ್ಕೆ ಹೋದ ಮಗಳು ಭಾರತಿ ಜಾರಿ ಬಿದ್ದು, ಮುಳಗುತ್ತಿರುವುದನ್ನು ಗಮನಿಸಿದ ಆಕೆಯ ತಂದೆ ಮರಿಯಪ್ಪ ಮತ್ತು ತಾಯಿ ಮುನಿಯಮ್ಮ ಮಗಳನ್ನು ರಕ್ಷಿಸಲು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಕೆರೆಯಲ್ಲಿ ಹೂಳು ತುಂಬಿದ್ದರಿಂದ ಮೂವರು ಹೊರಬರಲಾಗದೆ ಮೃತಪಟ್ಟಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗ್ರಾಮಾಂತರ ಪ್ರದೇಶಗಳಿಗೆ ಸತತ 7 ಗಂಟೆ 3 ಫೇಸ್ ವಿದ್ಯುತ್ ನೀಡಲು ರೈತರ ಒತ್ತಾಯ
ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
