ಖಾಲಿ ನಿವೇಶನಕ್ಕೆ ಈ-ಖಾತಾ ಮತ್ತು ಮ್ಯುಟೇಷನ್ ವರ್ಗಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಶಿವಕೋಟಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಪ್ರದೀಪ್ ಸಾಕ್ಷಿ ಸಹಿತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ಅವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ಈ-ಖಾತಾ ಮತ್ತು ಮ್ಯುಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಕೆಲಸವನ್ನು ಮಾಡಿಕೊಡಲು ಬಿಲ್ ಕಲಕ್ಟರ್ ಪ್ರದೀಪ್ ₹13,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಹಿತ ಬಿಲ್ ಕಲಕ್ಟರ್‌ಅನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿಹಂಗಮ ಹಾಲಿಡೇ ರೆಸಾರ್ಟ್ ಒತ್ತುವರಿ ತೆರವು; ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಜಾ
ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕ ಪವನ್ ನೆಟ್ಟೂರು, ಐಪಿಎಸ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ರಮೇಶ್ ಮತ್ತು ಸಿಬ್ಬಂದಿ ವರ್ಗದವರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.