ಬೆಂ.ಗ್ರಾಮಾಂತರ | ನರೇಗಾದಡಿ ಹಳ್ಳಿಗಳ ಸಮಗ್ರ ಅಭಿವೃದ್ಧಿಯಲ್ಲಿ ಜಿಲ್ಲೆಗೆ 4ನೇ ಸ್ಥಾನ

Date:

Advertisements

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಮಾನವ ದಿನಗಳ ಸೃಜನೆಯಲ್ಲಿ ಬೆಂ.ಗ್ರಾಮಾಂತರ ಜಿಲ್ಲೆಯು ಗುರಿ ಮೀರಿ ಸಾಧನೆ ಮಾಡಿದೆ. ಈ ಮೂಲಕ ರಾಜ್ಯದಲ್ಲೇ  4ನೇ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ 14ನೇ ಸ್ಥಾನದಲ್ಲಿತ್ತು. ಆರ್ಥಿಕ ವರ್ಷ 2024-25ನೇ ಸಾಲಿನಲ್ಲಿ 14 ಲಕ್ಷ ಗುರಿಗೆ 16,310 ಲಕ್ಷ ಮಾನವ ದಿನಗಳ ಸೃಜನೆ ಮಾಡಿ ಶೇ 116.50% ಪ್ರಗತಿಯನ್ನು ಸಾಧಿಸಿದೆ. ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಆಸ್ತಿಗಳ ಸೃಜನೆ ಮಾಡುವ ಮೂಲಕ ಗ್ರಾಮೀಣ ಜನರ ಸಬಲೀಕರಣಕ್ಕೆ ಹೆಚ್ಚಿನ ಅದ್ಯತೆಯನ್ನು ನೀಡಿ, ಗುರಿಯನ್ನು ಮಿರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4ನೇ ಸ್ಥಾನದಲ್ಲಿದೆ.

ಈ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆಯಲ್ಲಿ ತಾಲ್ಲೂಕುವಾರು ಪ್ರಗತಿಯನ್ನು ಸಾಧಿಸಿದೆ. ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ ತಾಲ್ಲೂಕು ಶೇ 104.19%, ಹೊಸಕೋಟೆ ತಾಲ್ಲೂಕು 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% ಪ್ರಗತಿಯನ್ನು ಸಾಧಿಸಿದೆ. ಸದರಿ ಯೋಜನೆಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, 2,61,128 ಮಂದಿ ಕೂಲಿಕಾರರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. 

Advertisements

ಯೋಜನೆಯಲ್ಲಿ ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಅರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ, ಸಾಮಾಜಿಕ ಅರಣ್ಯ ಇಲಾಖೆ, ಪಂಚಾಯತ್‌ ರಾಜ್‌ ಇಂಜನಿಯರಿಂಗ್‌ (ಪಿಆರ್‌ಇಡಿ) ಇಲಾಖೆಗಳು ಮಹತ್ವದ ಪಾತ್ರವಹಿಸಿವೆ. ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಚಟುವಟಿಕೆಗಳು ಸಮಗ್ರವಾಗಿ ಶಾಲಾಭಿವೃದ್ಧಿ, ಸ್ಮಶಾನ, ಚರಂಡಿ, ಬೂದು ನೀರು ನಿರ್ವಹಣೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಸಂಜೀವಿನಿ ಭವನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM)ಗಳ ಅಭಿವೃದ್ದಿಗೆ  ಸಹಕಾರಿಯಾಗಿದೆ. ವೈಯಕ್ತಿಕ ಕಾಮಗಾರಿಗಳಾದ ಹಸು ಶೆಡ್‌, ಕುರಿ ಶೆಡ್‌, ಹಂದಿ ಶೆಡ್‌, ಕೋಳಿ ಶೆಡ್‌, ವಸತಿ ಯೋಜನೆಯ ಫಲಾನುಭವಿಗಳು, ವಿಶೇಷ ಚೇತನರು, ಹಿರಿಯ ನಾಗರಿಕರು ಮತ್ತು  ಗರ್ಭಿಣಿ ಸ್ತ್ರೀಯರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಸ್ವಚ್ಚ ಭಾರತ್‌ ಮಿಷನ್‌ ಮತ್ತು ಬೂದು ನೀರು ನಿರ್ವಹಣೆ ಗ್ರಾಮೀಣ ಯೋಜನೆ ಅಧೀನದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂಲಕ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ನರೇಗಾ ಮೂಲಕವೂ ವಿಶೇಷ ಯೋಜನೆ ರೂಪಿಸಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ. 

ಮಹಿಳಾ ಸಬೀಕರಣಕ್ಕೆ ಸಹಕಾರಿಯಾದ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ, ಆರ್ಥಿಕ ವರ್ಷ 2024-25ನೇ ಸಾಲಿನಲ್ಲಿ ಶೇ.51.97 ಪ್ರಗತಿಯನ್ನು ಸಾಧಿಸಲಾಗಿರುತ್ತದೆ. ಮುಖ್ಯವಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯವಾಗಿದೆ.

ಸ್ತ್ರೀ – ಚೇತನ, ದುಡಿಯೋಣ ಬಾ ಅಭಿಯಾನ

ಮಹಿಳೆಯರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವುದಕ್ಕೆ ಏಪ್ರಿಲ್‌ 1ರಿಂದ ಜೂನ್‌ 30 ರವರೆಗೆ ಮೂರು ತಿಂಗಳ ಕಾಲ ಅಭಿಯಾನವನ್ನು ಹಮ್ಮಿಕೊಂಡಿದೆ. ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸ್ತ್ರೀ-ಚೇತನ ಮತ್ತು ದುಡಿಯೋಣ ಬಾ ಅಭಿಯಾನ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಶೇ.60ರಷ್ಟು ಗುರಿ ಸಾಧಿಸಲು, ಕರಪತ್ರ ವಿತರಣೆ, ಮನೆ ಮನೆಗೆ ಭೇಟಿ, ಆಟೋ ಮೂಲಕ ಪ್ರಚಾರ ಮಾಡುವುದು, ವಾರ್ಡ್‌ಗಳಲ್ಲಿ ಸಭೆ ಮಾಡುವುದು, ಗ್ರಾಮಗಳಲ್ಲಿನ ಸಭೆ ಮೂಲಕ ಇನ್ನೂ ಹೆಚ್ಚಿನ ಪ್ರಚಾರ ಮಾಡಲು ಯೋಜನೆ ರೂಪಿಸಿ 101 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಹುಬ್ಬಳ್ಳಿ, ಮಂಗಳೂರು ಅತ್ಯಾಚಾರ ಪ್ರಕರಣ; ಪೊಲೀಸ್‌ ಇಲಾಖೆ ಎಚ್ಚೆತ್ತುಕೊಳ್ಳಬೇಕು

ಆರ್ಥಿಕ ವರ್ಷ 2025-26ನೇ ಸಾಲಿನಲ್ಲಿ 15ಲಕ್ಷ ಮಾನವ ದಿನಗಳ ಸೃಜನೆಯ ಗುರಿ ಹೊಂದಲಾಗಿದ್ದು, ಗ್ರಾಮ ಪಂಚಾಯಿತಿಗಳಿಂದ ಬಂದಂತಹ ಯೋಜನೆಗಳಿಗೆ ರಾಜ್ಯದಿಂದ ಅನುಮೊದನೆಯನ್ನು ಪಡೆದುಕೊಂಡು ಕಾಮಗಾರಿಗಳಿಗೆ ನಿಯಮಾನುಸಾರ ಚಾಲನೆ ನೀಡಲಾಗಿದೆ. ನೈಸರ್ಗಿಕ ಸಂಪನ್ಮೂಲಗಳಾದ ಜಲ ಸಂರಕ್ಷಣೆ, ಅರಣ್ಯೀಕರಣ, ಗ್ರಾಮಗಳ ಸ್ವಚ್ಚತೆ ಮತ್ತು ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎನ್ನುತ್ತಾರೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್‌.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X