ಬೆಂಗಳೂರು ಗ್ರಾಮಾಂತರ | ಎಂಜಿನಿಯರ್‌ ಮನೆಯಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು ಪತ್ತೆ!

Date:

Advertisements

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಕಟ್ಟಡಗಳನ್ನು ನೆಲಸಮ ಮಾಡುವಾಗ ತಾಲೂಕಿನ ಮೋಪರಹಳ್ಳಿ ಗ್ರಾಮದ ಮನೆಯೊಂದರಲ್ಲಿ ಎಲೆಕ್ಟ್ರಾನಿಕ್‌ ಮತಯಂತ್ರದ (ಇವಿಎಂ) ಕಂಟ್ರೋಲ್ ಯೂನಿಟ್‌ಗಳು ಪತ್ತೆಯಾಗಿವೆ.

ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. “ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್‌ ಶಿವಕುಮಾರ್ ಎಂಬುವವರ ಮನೆಯಲ್ಲಿ ಎಲೆಕ್ಟ್ರಾನಿಕ್‌ ಮತಯಂತ್ರದ ಕಂಟ್ರೋಲ್ ಯೂನಿಟ್‌ಗಳು ಸಿಕ್ಕಿದ್ದು, ಎಲ್ಲ ಯೂನಿಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ” ಎಂದು ಮೋಹನಕುಮಾರಿ ತಿಳಿಸಿದ್ದಾರೆ.

“2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ತಿರಸ್ಕೃತವಾದ ಇವಿಎಂ ಕಂಟ್ರೋಲ್ ಯೂನಿಟ್‌ಗಳು ಎಂಬ ಮಾಹಿತಿ ಇದೆ” ಎಂದು ಹೇಳಿದ್ದಾರೆ. 

Advertisements

ಈ ಸುದ್ದಿ ಓದಿದ್ದೀರಾ? ಮಳೆಗೆ 21 ಜನರ ಸಾವು, ತಲಾ 5 ಲಕ್ಷ ಪರಿಹಾರ: ಸಚಿವ ಕೃಷ್ಣಭೈರೇಗೌಡ

“ಎಂಜಿನಿಯರ್‌ ತಮ್ಮ ಮನೆಯಲ್ಲಿ ಯಾವ ಕಾರಣಕ್ಕಾಗಿ ಈ ಯಂತ್ರಗಳನ್ನು ಇಟ್ಟುಕೊಂಡಿದ್ದರು ಎಂಬ ವಿಷಯ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ವಿವರಣೆ ಕೋರಿ ಎಂಜಿನಿಯರ್‌ ಶಿವಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ. ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿ ನೀಡಲಾಗಿದೆ” ಎಂದು ತಹಶೀಲ್ದಾರ್‌ ಮೋಹನಕುಮಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X