ಬೆಂಗಳೂರು ಗ್ರಾಮಾಂತರ | ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್‌ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ

Date:

Advertisements

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮಾದರಿ ನೀತಿ ಸಂಹಿತೆಯು ಮಾರ್ಚ್ 16ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಭಾರತ ಚುನಾವಣಾ ಆಯೋಗದ “ಸಿ-ವಿಜಿಲ್ ಸಿಟಿಜನ್ ಆ್ಯಪ್ (cVIGIL Citizen Application)” ಅನ್ನು ಬಳಕೆ ಮಾಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ ಹೇಳಿದ್ದಾರೆ.

ಮೊಬೈಲ್‌ನ ಪ್ಲೇ-ಸ್ಟೋರ್‌ನಲ್ಲಿ ಲಭ್ಯವಿರುವ ಸಿ-ವಿಜಿಲ್ ಸಿಟಿಜನ್ ಆ್ಯಪ್ (CVIGIL Citizen Application) ಡೌನ್‌ಲೋಡ್ ಮಾಡಿಕೊಳ್ಳುವ ಮ‌ೂಲಕ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ದೂರುಗಳನ್ನು ದಾಖಲು ಮಾಡಲು ಚುನಾವಣಾ ಆಯೋಗವು ಮತದಾರರಿಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ.

ಫೋನ್‌ನಲ್ಲಿ ಸೆರೆಹಿಡಿಯಲಾದ ವಿಡಿಯೋ ಅಥವಾ ಫೋಟೊ ರೂಪದ ದಾಖಲೆಗಳ ಮೂಲಕ ಸುಲಭವಾಗಿ ದೂರು ಸಲ್ಲಿಸಬಹುದು. ಈ ಆ್ಯಪ್‌ ಜಿಪಿಎಸ್ ಆಧಾರಿತವಾಗಿ ಕೆಲಸ ಮಾಡಲಿದ್ದು, ದೂರು ಸಲ್ಲಿಸುವ ವಿಳಾಸ ಚುನಾವಣಾ ಆಯೋಗಕ್ಕೆ ಹಾಗೂ ಸಂಬಂಧಿಸಿದ ಪೊಲೀಸರಿಗೆ ತಿಳಿಯುತ್ತದೆ. ಇದರಿಂದ ಆರೋಪಿತರನ್ನು ಸುಲಭವಾಗಿ ಪತ್ತೆ ಮಾಡಲು ಸಹಕಾರಿಯಾಗಲಿದೆ.

Advertisements

ಯಾವ ಸಮಯದಲ್ಲಿ ದೂರನ್ನು ಸಲ್ಲಿಸಬಹುದು : ಹಣ ಹಂಚುವುದು, ಉಡುಗೊರೆಗಳು/ಕೂಪನ್‌ಗಳ ವಿತರಣೆ, ಮದ್ಯ ವಿತರಣೆ, ಅನುಮತಿಯಿಲ್ಲದೆ ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ಹಂಚುವುದು, ಬಂದೂಕುಗಳ ಪ್ರದರ್ಶನ, ಬೆದರಿಕೆ, ಅನುಮತಿಯಿಲ್ಲದೆ ವಾಹನಗಳು ಅಥವಾ ಬೆಂಗಾವಲುಗಳನ್ನು ಬಳಕೆ ಮಾಡುವುದು, ಪಾವತಿಸಿದ ಸುದ್ದಿ ಆಸ್ತಿ ವಿರೂಪಗೊಳಿಸುವಿಕೆ, ಮತದಾನದ ದಿನದಂದು ಮತದಾರರ ಸಾಗಣೆ, ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಧಾರ್ಮಿಕ ಅಥವಾ ಕೋಮು ಭಾಷಣಗಳು ಸಂದೇಶಗಳು, ಅನುಮತಿಸಲಾದ ಸಮಯವನ್ನು ಮೀರಿ ಸ್ಪೀಕರ್‌ಗಳ ಬಳಕೆ, ರ್ಯಾಲಿಗಳಿಗೆ ಸಾರ್ವಜನಿಕರ ಸಾರಿಗೆ ಬಳಕೆ ಸೇರಿದಂತೆ ಇನ್ನಿತರೆ ದೂರುಗಳನ್ನು ಸಲ್ಲಿಸಬಹುದು. ದೂರು ಸಲ್ಲಿಸಿದ ನಂತರ ರಶೀದಿ ದೊರೆಯಲಿದ್ದು, ಅದು ಯಾವ ಹಂತದ ವಿಚಾರಣೆಯಲ್ಲಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಈ ಮೂಲಕ ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೈಜೋಡಿಸಬಹುದು.

ಈ ಸುದ್ದಿ ಓದಿದ್ದೀರಾ? ತುಮಕೂರು | ಒಳ ಮೀಸಲಾತಿ ಜಾರಿ ಮಾಡದ ಬಿಜೆಪಿ ಸೋಲಿಸಲು ಮಾದಿಗ ಸಮುದಾಯಕ್ಕೆ ಕರೆ ಕೊಟ್ಟ ಅಂಬಣ್ಣ ಅರೋಲಿಕರ್

ಸಿ-ವಿಜಿಲ್ ಸಿಟಿಜನ್ ಆ್ಯಪ್‌ನಲ್ಲಿ ದಾಖಲಾಗುವ ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

ಸಾರ್ವಜನಿಕರು ಚುನಾವಣಾ ದೂರುಗಳ ಹೆಚ್ಚಿನ ಮಾಹಿತಿಯನ್ನು https://cvigil.eci.gov.in/ನ ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X